ಪುತ್ತೂರಿನ ಎವಿಜಿ ಶಾಲೆಗೆ ಬೆಂಗಳೂರು ಡಿಡಿಪಿಐ ಲೋಕೇಶ್ .ಸಿ  ಭೇಟಿ

ಪುತ್ತೂರು: ಬನ್ನೂರು ಕೃಷ್ಣ ನಗರದಲ್ಲಿರುವ ಎವಿಜಿ ಇಂಗ್ಲೀಷ್ ಮೀಡಿಯಂ ಶಾಲೆಗೆ ಈ ಹಿಂದೆ ಪುತ್ತೂರಿನಲ್ಲಿ ಕ್ಷೇತ್ರ ಶಿಕ್ಷಣಾಧಿಕಾರಿಯಾಗಿದ್ದು, ಇದೀಗ ಪದೋನ್ನತಿ ಹೊಂದಿ ಬೆಂಗಳೂರು ಮಹಾನಗರ ಪಾಲಿಕೆಯ ವ್ಯಾಪ್ತಿಯಲ್ಲಿ ವಿದ್ಯಾಂಗ ಉಪನಿರ್ದೇಶಕರಾಗಿ ಕರ್ತವ್ಯ ನಿರ್ವಹಿಸುತ್ತಿರುವ ಲೋಕೇಶ್. ಸಿ ಅವರು ಭೇಟಿ ನೀಡಿದರು.

ಶಾಲೆಯ ತರಗತಿ ಕೊಠಡಿ, ಕಂಪ್ಯೂಟರ್ ಕೊಠಡಿಯನ್ನು ಹಾಗೂ ಕಚೇರಿಯನ್ನು ವೀಕ್ಷಿಸಿದ ಅವರು ಶಾಲಾ ಪರಿಸರ ಹಾಗೂ ಚಟುವಟಿಕೆಗಳ ಬಗ್ಗೆ ಮಾಹಿತಿ ಪಡೆದುಕೊಂಡು ಮೆಚ್ಚುಗೆ ವ್ಯಕ್ತಪಡಿಸಿದರು.

ಈ ಸಂದರ್ಭದಲ್ಲಿ ಶಾಲೆಯ ವತಿಯಿಂದ ಅವರನ್ನು ಹಾಗೂ ಅವರೊಂದಿಗೆ ಬಂದಿದ್ದ ಪುತ್ತೂರು ಕ್ಷೇತ್ರ ಶಿಕ್ಷಣಾಧಿಕಾರಿ ಅವರ ಕಚೇರಿಯ ಶಿಕ್ಷಣ ಸಂಯೋಜಕ ಹರಿಪ್ರಸಾದ್ ಅವರನ್ನು ಸನ್ಮಾನಿಸಿ ಗೌರವಿಸಲಾಯಿತು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ಶಾಲಾ ಆಡಳಿತ ಮಂಡಳಿಯ ಅಧ್ಯಕ್ಷರಾದ ವೆಂಕಟರಮಣ ಗೌಡ ಕಳುವಾಜೆ ವಹಿಸಿದರು. ಸಂಸ್ಥೆಯ ಆಡಳಿತ ಮಂಡಳಿ ಕಾರ್ಯದರ್ಶಿ ಗುಡ್ಡಪ್ಪ ಗೌಡ ಬಲ್ಯ ಸ್ವಾಗತಿಸಿ, ಕಾರ್ಯಕ್ರಮ ನಿರೂಪಿಸಿದರು. ಸಂಸ್ಥೆಯ ಆಡಳಿತ ಮಂಡಳಿ ಉಪಾಧ್ಯಕ್ಷ ಉಮೇಶ್ ಮಳುವೇಲು ಮತ್ತು ನಿರ್ದೇಶಕ ಸೀತಾರಾಮ ಕೆ ತಮ್ಮ ಅನಿಸಿಕೆಗಳನ್ನು ವ್ಯಕ್ತಪಡಿಸಿದರು.





























 
 

Leave a Comment

Your email address will not be published. Required fields are marked *

This site uses Akismet to reduce spam. Learn how your comment data is processed.

error: Content is protected !!
Scroll to Top