ಸುಳ್ಯ: ಗೌಡರ ಯುವ ಸೇವಾ ಸಂಘದಡಿ ಕಾರ್ಯಾಚರಿಸುತ್ತಿರುವ ಶ್ರೀ ಸುಳ್ಯ ವೆಂಕಟರಮಣ ಕ್ರೆಡಿಟ್ ಕೋ ಆಪರೇಟಿವ್ ಸೊಸೈಟಿ ಮಹಾಸಭೆ ಭಾನುವಾರ ಸುಳ್ಯದ ಕೊಡಿಯಾಲಬೈಲಿನಲ್ಲಿರುವ ಗೌಡ ಸಮುದಾಯ ಭವನದಲ್ಲಿ ನಡೆಯಿತು.
ಸಂಘದ ಅಧ್ಯಕ್ಷ ಪಿ.ಸಿ ಜಯರಾಮ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿ, ಸಂಘವು ವರದಿ ವರ್ಷದಲ್ಲಿ 1,060 ಕೋಟಿಗೂ ಮಿಕ್ಕಿ ವ್ಯವಹಾರ ನಡೆಸಿದ್ದು, 2.01 ಕೋಟಿ ನಿವ್ವಳ ಲಾಭ ಗಳಿಸಿದೆ. ಸಂಘದಲ್ಲಿ 19 ಸಾವಿರಕ್ಕೂ ಮಿಕ್ಕಿ ಸದಸ್ಯರಿದ್ದು, ಶೇ.15ರಷ್ಟು ಲಾಭಾಂಶ ವಿತರಿಸಲಾಗುವುದು ಎಂದು ಘೋಷಿಸಿದರು.
ಸಂಘದ ಕಾರ್ಯನಿರ್ವಹಣಾಧಿಕಾರಿ ಕೆ.ಟಿ ವಿಶ್ವನಾಥ ಸ್ವಾಗತಿಸಿ, ವರದಿ ಮಂಡಿಸಿದರು. ಸಂಘದ ಉಪಾಧ್ಯಕ್ಷ ಮೋಹನ್ ರಾಮ್ ಸುಳ್ಳಿ ವಂದಿಸಿದರು.
ವೇದಿಕೆಯಲ್ಲಿ ನಿರ್ದೇಶಕರಾದ ಜಾಕೆ ಸದಾನಂದ, ನಿತ್ಯಾನಂದ ಮುಂಡೋಡಿ, ಎ.ವಿ ತೀರ್ಥರಾಮ, ಚಂದ್ರ ಕೋಲ್ಚಾರ್, ಕೆ.ಸಿ ನಾರಾಯಣ ಗೌಡ, ಕೆ.ಸಿ ಸದಾನಂದ, ಪಿ.ಎಸ್ ಗಂಗಾಧರ, ದಿನೇಶ್ ಮಡಪ್ಪಾಡಿ, ದಾಮೋದರ ನಾರ್ಕೋಡು, ಹೇಮಚಂದ್ರ ಐ.ಕೆ, ನವೀನ್ ಜಾಕೆ, ಶೈಲೇಶ್ ಅಂಬೆಕಲ್, ಜಯಲಲಿತಾ ಕೆ.ಎಸ್, ಲತಾ ಮಾವಾಜಿ, ನಳಿನಿ ಸೂರಯ್ಯ ಉಪಸ್ಥಿತರಿದ್ದರು.