ರಾಷ್ಟ್ರಧ್ವಜದಲ್ಲಿ ಅರೇಬಿಕ್‌ ಬರಹ : ಇಬ್ಬರು ಸಹೋದರರ ಬಂಧನ

ಕೊಪ್ಪಳ: ರಾಷ್ಟ್ರಧ್ವಜದಲ್ಲಿ ಅಶೋಕ ಚಕ್ರದ ಬದಲಿಗೆ ಅರೇಬಿಕ್‌ ಅಕ್ಷರಗಳನ್ನು ಬರೆದು ಧ್ವಜ ಹಾರಿಸಿದ ಪ್ರಕರಣಕ್ಕೆ ಸಂಬಂಧಿಸಿ ಇಬ್ಬರು ಯುವಕರನ್ನು ಕೊಪ್ಪಳ ಪೊಲೀಸರು ಬಂಧಿಸಿದ್ದಾರೆ. ಯಲಬುರ್ಗಾ ಪಟ್ಟಣದ ಮಹ್ಮದ್ ದಾನೀಶ್ ಕುತುಬುದ್ಧೀನ್ ಖಾಜಿ ಹಾಗೂ ಅವನ ಸಹೋದರ ಮಹ್ಮದ್ ಆದಿನಾನ್ ಖಾಜಿ ಬಂಧಿತ ಯುವಕರು.
ಈದ್ ಮಿಲಾದ್ ಆಚರಣೆ ವೇಳೆ ಬಟ್ಟೆಯಿಂದ ತ್ರಿವರ್ಣ ಧ್ವಜ ಹೊಲಿದು ಬಿಳಿಬಣ್ಣದ ಜಾಗದಲ್ಲಿ ಅಶೋಕ ಚಕ್ರದ ಬದಲಿಗೆ ಅರೇಬಿಕ್‌ ಅಕ್ಷರದಲ್ಲಿ ‘ಲಾ ಇಲ್ಲಾಹ ಇಲ್ಲಾಲ್ಲಾ ಮೊಹಮದ್ ರಸೂಲಲ್ಲಾ’ ಎಂದು ಬರೆಯಲಾಗಿತ್ತು. ಧ್ವಜವನ್ನು ವಿರೂಪಗೊಳಿಸಿದ್ದ ಫೋಟೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿತ್ತು.
ಬಿ.ಬಿ.ಫಾತಿಮಾ ದರ್ಗಾದ ಮೇಲೆ ಅರೇಬಿಕ್ ಅಕ್ಷರಗಳುಳ್ಳ ತ್ರಿವರ್ಣ ಧ್ವಜ ಹಾರಾಡುತ್ತಿದೆ ಎಂದು ಕೆಲವರು ಶನಿವಾರ ಯಲಬುರ್ಗಾ ಪೊಲೀಸರಿಗೆ ದೂರು ನೀಡಿದ್ದರು. ಘಟನಾ ಸ್ಥಳಕ್ಕೆ ಭೇಟಿ ನೀಡಿದ ಪೊಲೀಸರು, ದರ್ಗಾದ ಅಧಿಕಾರಿಗಳನ್ನು ಧ್ವಜ ತೆಗೆಯುವಂತೆ ಸೂಚಿಸಿದರು. ಬಳಿಕ ಧ್ವಜವನ್ನು ವಿರೂಪಗೊಳಿಸಿದ್ದ ಮೊಹಮ್ಮದ್ ದಾನಿಶ್ ಕುತುಬುದ್ದೀನ್ ಖಾಝಿ ಮತ್ತು ಆತನ ಸಹೋದರ ಮೊಹಮ್ಮದ್ ಅದಿನಾನ್ ಖಾಜಿ ವಿರುದ್ಧ ಎಫ್ಐಆರ್ ದಾಖಲಿಸಿಕೊಂಡರು.
ಈ ನಡುವೆ ಕಳೆದ ಕೆಲವು ದಿನಗಳಿಂದ ಕೋಮುಗಲಭೆಗಳು ನಡೆಯುತ್ತಿದ್ದು, ಇಂತಹ ಘಟನೆಗಳು ನಡೆಯದಂತೆ ಪೊಲೀಸರು ಬಿಗಿ ಬಂದೋಬಸ್ತ್ ಮಾಡುವಂತೆ ಜಿಲ್ಲೆಯ ನಿವಾಸಿಗಳು ಮನವಿ ಮಾಡಿದ್ದಾರೆ.

Leave a Comment

Your email address will not be published. Required fields are marked *

This site uses Akismet to reduce spam. Learn how your comment data is processed.

error: Content is protected !!
Scroll to Top