ಪುತ್ತೂರು: ಜಿಲ್ಲಾಡಳಿತ ಮತ್ತು ಜಿಲ್ಲಾ ಪಂಚಾಯತ್ ದಕ್ಷಿಣ ಕನ್ನಡ ಉಪನಿರ್ದೇಶಕರ ಕಛೇರಿ, ಶಾಲಾ ಶಿಕ್ಷಣ ಇಲಾಖೆ ಮಂಗಳೂರು ಆಶ್ರಯದಲ್ಲಿ ನಡೆದ ತಾಲೂಕು ಮಟ್ಟದ ಖೋ ಖೋ ಪಂದ್ಯಾಟದಲ್ಲಿ ವಿವೇಕಾನಂದ ಕನ್ನಡ ಮಾಧ್ಯಮ ಶಾಲಾ ಪ್ರೌಢಶಾಲಾ ಬಾಲಕರ ತಂಡ ಪ್ರಥಮ ಸ್ಥಾನ ಗಳಿಸಿ ಜಿಲ್ಲಾ ಮಟ್ಟಕ್ಕೆ ಆಯ್ಕೆಯಾಗಿದೆ.
ತಂಡವನ್ನು ತರುಣ್, ದೀಪಕ್, ಪ್ರಜ್ವಲ್, ಮೇಘರಾಜ್, ಭವಿತ್, ವಿನೀತ್, ಲಿಖಿತ್, ಕೀರ್ತನ್, ದೇಶ್ಚಿತ್, ಭಾಸ್ವತ್ ಪ್ರತಿನಿಧಿಸಿದ್ದರು.
ತಂಡವನ್ನು ಆಡಳಿತ ಮಂಡಳಿ, ಶಾಲಾ ಮುಖ್ಯ ಶಿಕ್ಷಕರು, ಸಿಬ್ಬಂದಿ ವರ್ಗದವರು ಅಭಿನಂದಿಸಿದ್ದಾರೆ.
























