ಎರಡು ಕೋಟಿ ರೂ. ಸಾಲ ಬಾಕಿ | ವಸೂಲಾತಿಗೆ ಹೋದ ಬ್ಯಾಂಕ್‍ ಸಿಬ್ಬಂದಿಗಳನ್ನು ಪಿಸ್ತೂಲ್ ತೋರಿಸಿ ಕೂಡಿಹಾಕಿದ ಅಪ್ಪ-ಮಗ : ಪ್ರಕರಣ ದಾಖಲು

ಪುತ್ತೂರು: ಬೊಳುವಾರಿನಲ್ಲಿ ಕಾರ್ಯಾಚರಿಸುತ್ತಿರುವ ತಿರುಮಲ ಹೊಂಡಾ ಮಾಲಕರು ಎಸ್‍ ಬಿಐ ಬ್ಯಾಂಕ್‍ ನಿಂದ ಪಡೆದುಕೊಂಡ  2 ಕೋಟಿ ಸಾಲ ಮರುಪಾವತಿಸಿಲ್ಲ ಎಂದು ವಸೂಲಾತಿಗೆ ಹೋದ ಬ್ಯಾಂಕ್ ಸಿಬ್ಬಂದಿಗಳಿಗೆ ಪಿಸ್ತೂಲ್ ತೋರಿಸಿ ಬೆದರಿಕೆ ಹಾಕಿದ ಘಟನೆ ನಡೆದಿದ್ದು ಶಸ್ತ್ರಾಸ್ತ್ರ ಕಾಯ್ದೆಯಡಿ ಪ್ರಕರಣ ದಾಖಲಾಗಿದೆ.

ಪುತ್ತೂರು ಕೋರ್ಟ್ ರೋಡ್ ನ ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾದ ರಿಲೇಷನ್ ಶಿಪ್ ಮ್ಯಾನೇಜರ್ ಆದ ಚಿಕ್ಕಮಗಳೂರು ಕೊಪ್ಪ ತಾಲೂಕು ನಿವಾಸಿ ಚೈತನ್ಯ ಹೆಚ್.ಸಿ ನೀಡಿದ ದೂರಿನಂತೆ ಪ್ರಕರಣ ದಾಖಲಾಗಿದೆ.

ಬ್ಯಾಂಕ್ ನಲ್ಲಿ ಪುತ್ತೂರು ತಾಲೂಕು, ಬಲ್ನಾಡು ಗ್ರಾಮದ ಉಜಿರ್ ಪಾದೆ ನಿವಾಸಿ  ಕೀರ್ತಿ ಅಖಿಲೇಶ್ ಎಂಬವರು 2 ಕೋಟಿ ರೂ. ಸಾಲ ಮಾಡಿದ್ದು, ಸದ್ರಿ ಸಾಲ ಮರುಪಾವತಿ ಮಾಡದೇ NPA ಆಗಿರುತ್ತದೆ. ಸಾಲ ಬಾಕಿಯ ಬಗ್ಗೆ, ಹಲವಾರು ಬಾರಿ ವಕೀಲರ ಮುಖಾಂತರ ಲೀಗಲ್ ನೋರ್ಟಿಸ್ ಮಾಡಿದರೂ, ತಿಳಿಸಿ ಹೇಳಿದ್ದರೂ ಸಾಲ ಮರುಪಾವತಿ ಮಾಡಿರುವುದಿಲ್ಲ. ಈ ಬಗ್ಗೆ ಮೇಲಾಧಿಕಾರಿಗಳ ಮೌಖಿಕ ಆದೇಶದಂತೆ, ಬುಧವಾರ ಮಧ್ಯಾಹ್ನ, ದೂರುದಾರರು ಸಹೋದ್ಯೋಗಿಗಳಾದ ಆಕಾಶ್ ಚಂದ್ರಬಾಬು ಮತ್ತು ದಿವ್ಯಶ್ರೀ ಅವರೊಂದಿಗೆ ಪುತ್ತೂರು ತಾಲೂಕು ಬಲ್ನಾಡು ಗ್ರಾಮದ ಉಜಿರುಪಾದೆಯಲ್ಲಿರುವ ಕೀರ್ತಿ ಅಖಿಲೇಶ್ ರವರ ಮನೆಗೆ ಹೋಗಿದ್ದಾರೆ. ಮನೆಯಲ್ಲಿದ್ದ ಅರುಣ್ ಕಿಶೋರ್ ರವರು ದೂರುದಾರರನ್ನು ಮನೆ ಒಳಗೆ ಬರಮಾಡಿಕೊಂಡಿರುತ್ತಾರೆ. ಬಳಿಕ ಅಖಿಲೇಶ್ ರವರಿಗೆ ಕರೆ ಮಾಡಿ ವಿಚಾರ ತಿಳಿಸಿರುತ್ತಾರೆ. ಅಖಿಲೇಶ್ ರವರು ಮನೆಗೆ ಬಂದು ಪಿರ್ಯಾದಿದಾರರಲ್ಲಿ ಮನೆಗೆ ಬಂದ ಬಗ್ಗೆ ತಕರಾರು ತೆಗೆದು ಗದರಿಸಿರುವುದಲ್ಲದೇ, ತಂದೆ ಬರುವ ತನಕ ಕೂರುವಂತೆ ಮನೆಯ ಬಾಗಿಲು ಹಾಕಿ ಬಲವಂತವಾಗಿ ಕೂರಿಸಿರುತ್ತಾರೆ.































 
 

ಬಳಿಕ ಕೃಷ್ಣ ಕಿಶೋರ್ ರವರು ಕೂಡಾ ಮನೆಗೆ ಬಂದು ಪಿರ್ಯಾದಿದಾರರಲ್ಲಿ ಮನೆಗೆ ಬಂದ ಬಗ್ಗೆ, ತಕರಾರು ತೆಗೆದು, ಗದರಿಸಿ

ಪಿಸ್ತೂಲ್ ತೋರಿಸಿ ಶೂಟ್ ಮಾಡುತ್ತೇನೆ ಎಂದು ಜೀವ ಬೆದರಿಕೆ ಹಾಕಿರುತ್ತಾರೆ ಎಂಬುದಾಗಿ ಗುರುವಾರ ಪುತ್ತೂರು ಗ್ರಾಮಾಂತರ ಪೊಲೀಸ್ ಠಾಣೆಗೆ ದೂರು ನೀಡಿದ್ರು 109/2024, ಕಲಂ: 132, 127(2),351(2) w 3(5) ಬಿ.ಎನ್.ಎಸ್ ಮತ್ತು ಕಲಂ 27 ARMS Act ರಂತೆ ಪ್ರಕರಣ ದಾಖಲಾಗಿದೆ.

Leave a Comment

Your email address will not be published. Required fields are marked *

This site uses Akismet to reduce spam. Learn how your comment data is processed.

error: Content is protected !!
Scroll to Top