ಪುತ್ತೂರು ತಾಲೂಕು ಕಚೇರಿ ಉದ್ಯೋಗಿ ಕನಕರಾಜ್ ನಿಧನ

ಪುತ್ತೂರು: ಇಲ್ಲಿನ ತಾಲೂಕು ಕಚೇರಿಯ ಉದ್ಯೋಗಿ ಕನಕರಾಜ್ ಹೃದಯಾಘಾತದಿಂದ ನಿಧನರಾಗಿದ್ದಾರೆ.

ಚುನಾವಣಾ ಶಾಖೆಯಲ್ಲಿ ಪ್ರಥಮ ದರ್ಜೆ ಸಹಾಯಕರಾಗಿದ್ದ ಕನಕರಾಜ್ ಹೃದಯಾಘಾತದಿಂದ ನಿಧನರಾದರು. ನಿನ್ನೆ ರಾತ್ರಿ ವೇಳೆ ಕನಕರಾಜ್ ಅವರ ಅರೋಗ್ಯದಲ್ಲಿ ಏರುಪೇರು ಉಂಟಾಗಿದ್ದು, ಕೂಡಲೇ ಆಸ್ಪತ್ರೆಗೆ ಕರೆ ತರಲಾಯಿತು. ಆದರೆ ಆಸ್ಪತ್ರೆ ತಲುಪುವಷ್ಟರಲ್ಲಿ ಅವರು ಮೃತಪಟ್ಟಿದ್ದಾರೆ ಎಂದು ತಿಳಿದುಬಂದಿದೆ.

ಮೈಸೂರಿನ ಕೊಳ್ಳೆಗಾಲ ನಿವಾಸಿಯಾಗಿರುವ ಕನಕರಾಜ್ ಈ ಹಿಂದೆ ಬೆಟ್ಟಂಪಾಡಿಯಲ್ಲಿ ಗ್ರಾಮ ಆಡಳಿತಾಧಿಕಾರಿಯಾಗಿ ಕರ್ತವ್ಯ ನಿರ್ವಹಿಸಿದ್ದರು. ನಂತರ ಪ್ರಥಮ ದರ್ಜೆ ಸಹಾಯಕರಾಗಿ ಭಡ್ತಿ ಪಡೆದು ತಾಲೂಕು ಕಚೇರಿಯ ಚುನಾವಣಾ ಶಾಖೆಯಲ್ಲಿ ಕರ್ತವ್ಯ ನಿರ್ವಹಿಸಿದ್ದರು.





























 
 

Leave a Comment

Your email address will not be published. Required fields are marked *

This site uses Akismet to reduce spam. Learn how your comment data is processed.

error: Content is protected !!
Scroll to Top