ದಸರಾ ಹಬ್ಬದ ಸಂದರ್ಭದಲ್ಲಿ ಕೇಂದ್ರದಿಂದ ರೈತರಿಗೆ ಗಿಫ್ಟ್
ಹೊಸದಿಲ್ಲಿ: ದಸರಾ ಹಬ್ಬದ ಸಂದರ್ಭದಲ್ಲಿ ಕೇಂದ್ರ ಸರಕಾರ ರೈತರಿಗೆ ಉಡುಗೊರೆಯೊಂದನ್ನು ನೀಡಲಿದೆ. ಪ್ರಧಾನಮಂತ್ರಿ ಕಿಸಾನ್ ಸಮ್ಮಾನ್ ನಿಧಿ ಯೋಜನೆಯಲ್ಲಿ ವರ್ಷಕ್ಕೆ ಮೂರು ಬಾರಿ ನೀಡಲಾಗುವ ಕಂತಿನ ಹಣ ಅಕ್ಟೋಬರ್ 5ಕ್ಕೆ ಬರಲಿದೆ.
ಈವರೆಗೆ 17 ಕಂತಿನ ಹಣವನ್ನು ಸರ್ಕಾರ ಬಿಡುಗಡೆ ಮಾಡಿದೆ. ಅ. 5ಕ್ಕೆ 18ನೇ ಕಂತಿನ ಹಣ ಬಿಡುಗಡೆ ಆಗಲಿದೆ. ಜೂನ್ 18ಕ್ಕೆ 17ನೇ ಕಂತಿನ ಹಣ ಬಿಡುಗಡೆ ಆಗಿತ್ತು. 2019ರಲ್ಲಿ ಆರಂಭವಾದ ಈ ಯೋಜನೆಯಲ್ಲಿ ಎಲ್ಲ ನೋಂದಾಯಿತ ರೈತರಿಗೆ ವರ್ಷಕ್ಕೆ ಮೂರು ಕಂತುಗಳಲ್ಲಿ 6,000 ರೂ. ಸರ್ಕಾರ ಸಹಾಯಧನವಾಗಿ ನೀಡುತ್ತದೆ.
ಎರಡು ಹೆಕ್ಟೇರ್ ಅಥವಾ ಐದು ಎಕರೆಯೊಳಗಿನ ಜಮೀನು ಹೊಂದಿರುವ ರೈತರು ಈ ಸ್ಕೀಮ್ಗೆ ಅರ್ಹರಾಗಿರುತ್ತಾರೆ. ಸಣ್ಣ ರೈತರಿಗೆ ವ್ಯವಸಾಯಕ್ಕೆ ಸಹಾಯವಾಗಲೆಂದು ಸರ್ಕಾರ ಈ ಸ್ಕೀಮ್ ಆರಂಭಿಸಿದೆ. ಸರ್ಕಾರಿ ಸೇವೆಯಲ್ಲಿರುವವರು, ವೈದ್ಯ, ವಕೀಲ ಇತ್ಯಾದಿ ವೃತ್ತಿಪರ ಕೆಲಸದವರು, ಶಾಸಕರು, ಸಂಸದರು ಇತ್ಯಾದಿ ಜನಪ್ರತಿನಿಧಿಗಳು, ತೆರಿಗೆ ಪಾವತಿಸುತ್ತಿರುವವರು ಹಾಗೂ ಅವರು ಇರುವ ಕುಟುಂಬದವರು ಪಿಎಂ ಕಿಸಾನ್ ಯೋಜನೆ ಪಡೆಯಲು ಅರ್ಹತೆ ಹೊಂದಿರುವುದಿಲ್ಲ. ಇಲ್ಲಿಯವರೆಗೆ ಸುಮಾರು 10 ಕೋಟಿ ರೈತರು ಸ್ಕೀಮ್ಗೆ ನೋಂದಾಯಿಸಿಕೊಂಡಿದ್ದಾರೆ.