ಪುತ್ತೂರು: ಬಿಜೆಪಿ ಮಹಿಳಾ ಮೋರ್ಚಾ ಪುತ್ತೂರು ನಗರ ಮಂಡಲ ಪದಾಧಿಕಾರಿಗಳನ್ನು ಆಯ್ಕೆ ಮಾಡಲಾಗಿದೆ.
ಮಹಿಳಾ ಮೋರ್ಚಾ ನಗರ ಮಂಡಲ ಅಧ್ಯಕ್ಷರಾಗಿ ಸ್ವರ್ಣಲತಾ ಹೆಗ್ಡೆ ಅವರನ್ನು ನಿಯುಕ್ತಿಗೊಳಿಸಲಾಗಿದೆ.

ಈ ಸಂದರ್ಭದಲ್ಲಿ ಮಾಜಿ ಶಾಸಕ ಸಂಜೀವ ಮಠಂದೂರು, ಬಿಜೆಪಿ ನಗರ ಮಂಡಲ ಅಧ್ಯಕ್ಷ ಶಿವಕುಮಾರ್ ಪಿ.ಬಿ. ಕಲ್ಲಿಮಾರು, ಜಿಲ್ಲಾ ಬಿಜೆಪಿ ಕಾರ್ಯದರ್ಶಿ ವಿದ್ಯಾ ಆರ್ ಗೌರಿ, ಬಿಜೆಪಿ ನಗರ ಮಂಡಲ ಪ್ರಧಾನ ಕಾರ್ಯದರ್ಶಿ ಅನಿಲ್ ತೆಂಕಿಲ , ಬಿಜೆಪಿ ಗ್ರಾಮಾಂತರ ಮಂಡಲ ಉಪಾಧ್ಯಕ್ಷ ಹರಿಪ್ರಸಾದ್ ಯಾದವ್, ನಗರ ಮಂಡಲ ಉಪಾಧ್ಯಕ್ಷ ಯುವರಾಜ್ ಕೆ ಪೆರಿಯಾತ್ತೊಡಿ, ಬಿಜೆಪಿ ಮಹಿಳಾ ಮೋರ್ಚಾ ನಗರ ಮಂಡಲ ಪ್ರಧಾನ ಕಾರ್ಯದರ್ಶಿಗಳಾದ ಜಯಲಕ್ಷ್ಮಿ ಶಗ್ರಿತ್ತಾಯ, ಸುನೀತಾ, ಬಿಜೆಪಿ ಮಹಿಳಾ ಮೋರ್ಚಾ ಉಪಾಧ್ಯಕ್ಷೆ ವಿಮಲ ಸುರೇಶ್, ಬಿಜೆಪಿ ಮಹಿಳಾ ಮೋರ್ಚಾ ಪದಾಧಿಕಾರಿಗಳು, ಕಾರ್ಯಕರ್ತರು ಉಪಸ್ಥಿತರಿದ್ದರು.

























