ನಿವೃತ್ತ ಮುಖ್ಯ ಶಿಕ್ಷಕ, ಸಾಹಿತಿ ನುಳಿಯಾಲು ರಘುನಾಥ ರೈ ನಿಧನ

ಪುತ್ತೂರು: ನಿವೃತ್ತ ಶಿಕ್ಷಕ, ಸಾಹಿತಿ ನುಳಿಯಾಲು ರಘುನಾಥ ರೈ (80) ಅಲ್ಪ ಕಾಲದ ಅಸೌಖ್ಯದಿಂದ ಶನಿವಾರ ರಾತ್ರಿ ಸ್ವಗೃಹದಲ್ಲಿ ನಿಧನರಾದರು.

 ಕಳೆದ ಎರಡು ವಾರಗಳಿಂದ ತೀವೃ ಅನಾರೋಗ್ಯದಿಂದ ಬಳಲುತ್ತಿದ್ದ ಅವರು ಮಂಗಳೂರಿನಲ್ಲಿ ಚಿಕಿತ್ಸೆ ಪಡೆದಿದ್ದರು.

ಸುಳ್ಯಪದವು ಬಾಲಸುಬ್ರಹ್ಮಣ್ಯ ಹಿರಿಯ ಪ್ರಾಥಮಿಕ ಶಾಲೆಯಲ್ಲಿ 33 ವರ್ಷಗಳ ಕಾಲ ಸೇವೆ ಸಲ್ಲಿಸಿದ್ದರು. ಬಹುಮುಖ ಪ್ರತಿಭೆಯಾಗಿದ್ದ ಅವರಿಗೆ 1993 ರಲ್ಲಿ ಜಿಲ್ಲಾ ಅತ್ಯುತ್ತಮ ಶಿಕ್ಷಕ ಪ್ರಶಸ್ತಿ, 2015 ರಲ್ಲಿ ಎನ್‍.ಎಸ್‍.ಕಿಲ್ಲೆ ಪ್ರಶಸ್ತಿ ಲಭಿಸಿದೆ.



































 
 

2018 ರಲ್ಲಿ ಪುತ್ತೂರಿನಲ್ಲಿ ನಡೆದ ಕರ್ನಾಟಕ ಏಕೀಕರಣ ಸಾಹಿತ್ಯ ಸಮ್ಮೇಳನದ ಅಧ್ಯಕ್ಷರಾಗಿದ್ದರು. ಉತ್ತಮ ವಾಗ್ಮಿಯಾಗಿದ್ದ ಅವರು ಹಲವು ಕಡೆಗಳಲ್ಲಿ ಧಾರ್ಮಿಕ ಉಪನ್ಯಾಸ ನೀಡಿದ್ದರು. ಪುತ್ತೂರು ಶ್ರೀ ರಾಮಕೃಷ್ಣ ಪ್ರೌಢಶಾಲೆ ಆಡಳಿತ ಮಂಡಳಿ ಸದಸ್ಯರಾಗಿ, ಬೆಟ್ಟಂಪಾಡಿ ಸರಕಾರಿ ಪ್ರಥಮದರ್ಜೆ ಕಾಲೇಜಿನ ಆಡಳಿತ ಮಂಡಳಿ ಸದಸ್ಯರಾಗಿಯೂ ಸೇವೆ ಸಲ್ಲಿಸಿದ್ದರು.

ಮೃತರು ಪತ್ನಿ, ಪುತ್ರ, ಪುತ್ರಿ ಸಹಿತ ಅಪಾರ ಬಂಧು ಬಳಗವನ್ನು ಅಗಲಿದ್ದಾರೆ.

Leave a Comment

Your email address will not be published. Required fields are marked *

This site uses Akismet to reduce spam. Learn how your comment data is processed.

error: Content is protected !!
Scroll to Top