ಬೆಳಂದೂರು:- ಸರಕಾರಿ ಪ್ರಥಮ ದರ್ಜೆ ಕಾಲೇಜಿನ ಆಂತರಿಕ ಗುಣಮಟ್ಟ ಭರವಸಾ ಕೋಶದ ನೇತೃತ್ವದಲ್ಲಿ 2024-25 ನೇ ಸಾಲಿನ ಶೈಕ್ಷಣಿಕ ಚಟುವಟಿಕೆಗಳ ಉದ್ಘಾಟನೆ, ರಕ್ಷಕ ಶಿಕ್ಷಕ ಸಂಘದ ಸಭೆ ಮತ್ತು 2023-24 ನೇ ಸಾಲಿನಲ್ಲಿ ವಿಶಿಷ್ಟ ಶ್ರೇಣಿಯಲ್ಲಿ ಉತ್ತೀರ್ಣರಾದ ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ ಕಾರ್ಯಕ್ರಮ ಏರ್ಪಡಿಸಲಾಯಿತು.
ವಚನ ಜಯರಾಮ್ ಅರವಗುತ್ತು ದೀಪ ಪ್ರಜ್ವಲನದ ಮೂಲಕ ಶೈಕ್ಷಣಿಕ ಚಟುವಟಿಕೆಗಳಿಗೆ ಚಾಲನೆ ನೀಡಿ ಪ್ರತಿಭಾ ಪುರಸ್ಕೃತ ವಿದ್ಯಾರ್ಥಿಗಳಿಗೆ ಶುಭ ಹಾರೈಸಿದರು. ಹಿರಿಯ ವಿದ್ಯಾರ್ಥಿಗಳು, ಪೋಷಕರು ಕಾಲೇಜಿನ ರಾಯಭಾರಿಗಳಾಗಿ ಕಾಲೇಜಿನ ಬೆಳವಣಿಗೆಗಳಿಗೆ ಸಹಕರಿಸಲು ವಿನಂತಿಸಿದರು.
ಕಾರ್ಯಕ್ರಮದಲ್ಲಿ ಕಾಲೇಜು ಅಭಿವೃದ್ಧಿ ಸಮಿತಿ ಸದಸ್ಯರಾದ ಪ್ರವೀಣ್ ಕುಮಾರ್ ಕೆಡಂಜಿಗುತ್ತು, ಸೀತಾರಾಮ ಮುಂಡಾಳ, ಜಲೀಲ್ ಬೈತಡ್ಕ, ಶ್ರೀ ಶೀನಪ್ಪ ಗೌಡ ಬೈತಡ್ಕ, ಶುಭ ಆರ್. ನೋಂಡಾ, ಗೌರಿ ಮತ್ತು ಅಚ್ಯುತ ಗೌಡ ಕಂಪ ಮುಖ್ಯ ಅತಿಥಿಗಳಾಗಿ ಪಾಲ್ಗೊಂಡಿದ್ದರು.
ಕಳೆದ ಸಾಲಿನಲ್ಲಿ ವಿಶಿಷ್ಟ ಶ್ರೇಣಿಯಲ್ಲಿ ತೇರ್ಗಡೆ ಹೊಂದಿದ ಬಿ.ಎ, ಬಿ.ಕಾಂ, ಬಿ.ಬಿ.ಎ ವಿದ್ಯಾರ್ಥಿಗಳಿಗೆ ಪ್ರಶಸ್ತಿ ಫಲಕ, ಪ್ರಮಾಣಪತ್ರ, ಪುಸ್ತಕಗಳನ್ನು ನೀಡಿ ಗೌರವಿಸಲಾಯಿತು. ಪುತ್ತೂರು ತಾಲೂಕು ಕನ್ನಡ ಸಾಹಿತ್ಯ ಪರಿಷತ್ ಪುಸ್ತಕಗಳನ್ನು ಕೊಡುಗೆಯಾಗಿ ನೀಡಿ ಸಹಕರಿಸಿತು.
ಪ್ರಾಂಶುಪಾಲ ಡಾ.ಶಂಕರ ಭಟ್ ಪಿ ಸಮಾರಂಭದ ಅಧ್ಯಕ್ಷತೆ ವಹಿಸಿದ್ದರು. ಐಕ್ಯುಎಸಿ ಸಂಚಾಲಕ ಸ್ವಾಮಿ.ಎಸ್. ಸ್ವಾಗತಿಸಿ, ಉದ್ಘಾಟಕರನ್ನು ಪರಿಚಯಿಸಿದರು. ಹನುಮಂತ ಗೌಡ ಡಿ.ಎಂ. ವಂದಿಸಿ, ದೀಕ್ಷಾ, ಕಿರಣ್ ಕಾರ್ಯಕ್ರಮ ನಿರೂಪಿಸಿದರು.
ಸಭಾ ಕಾರ್ಯಕ್ರಮದ ಬಳಿಕ ರಕ್ಷಕ ಶಿಕ್ಷಕ ಸಂಘದ ಪ್ರಸಕ್ತ ಸಾಲಿನ ಸದಸ್ಯರುಗಳ ಆಯ್ಕೆ ಪ್ರಕ್ರಿಯೆ ನಡೆದು ಮನೋಜ್ ಸುವರ್ಣ ಸೊರಕೆ ಅಧ್ಯಕ್ಷರಾಗಿ, ಸವಿತಾ ಉಪಾಧ್ಯಕ್ಷರಾಗಿ ಆಯ್ಕೆಯಾದರು. ಈ ವೇಳೆ ಕಾಲೇಜು ಅಭಿವೃದ್ಧಿ ಸಮಿತಿ ಸದಸ್ಯರು ಉಪಸ್ಥಿತರಿದ್ದು ಮಾರ್ಗದರ್ಶನ ಮಾಡಿದರು.