ಪುತ್ತೂರು: ಕರ್ನಾಟಕ ಸುವರ್ಣ ಸಂಭ್ರಮ ಆಚರಣೆಯ ಪ್ರಯುಕ್ತ ‘ಹೆಸರಾಯಿತು ಕರ್ನಾಟಕ- ಉಸಿರಾಗಲಿ ಕನ್ನಡ’ ಎಂಬ ಅಭಿಯಾನದ ಅಂಗವಾಗಿ ರಾಜ್ಯಾದ್ಯಂತ ನಡೆಯುತ್ತಿರುವ ‘ಕನ್ನಡ ಜ್ಯೋತಿ ರಥಯಾತ್ರೆ’ ನಾಳೆ (ಅ.1) ಪುತ್ತೂರಿಗೆ ಆಗಮಿಸಲಿದೆ.
ಪುತ್ತೂರು ತಾಲೂಕು ಆಡಳಿತ ಹಾಗೂ ಪುತ್ತೂರು ತಾಲೂಕು ಕನ್ನಡ ಸಾಹಿತ್ಯ ಪರಿಷತ್ತು ಈ ಭವ್ಯ ರಥವನ್ನು ಕನಕಮಜುಲುವಿನಲ್ಲಿ ನಾಳೆ ಬೆಳಗ್ಗೆ 10 ಗಂಟೆಗೆ ಸ್ವಾಗತಿಸಲಿದ್ದು ಬಳಿಕ 10:30 ಕ್ಕೆ ಸರಿಯಾಗಿ ಪುತ್ತೂರು ಆಡಳಿತ ಸೌಧದ ಬಳಿ ಕನ್ನಡ ಭುವನೇಶ್ವರಿಗೆ ಪುಷ್ಪಾರ್ಚನೆ ನಡೆಯಲಿದೆ.
ಕನ್ನಡ ಪ್ರೇಮಿಗಳಾದ ತಾವೆಲ್ಲರೂ ಹೆಚ್ಚಿನ ಸಂಖ್ಯೆಯಲ್ಲಿ ನಾಳೆ ಬೆಳಗ್ಗೆ ಆಡಳಿತ ಸೌಧದ ಬಳಿ ಆಗಮಿಸಿ ಕನ್ನಡ ಭುವನೇಶ್ವರಿಗೆ ಪುಷ್ಪಾರ್ಚನೆ ನೆರವೇರಿಸಿ ತಾಲೂಕು ಆಡಳಿತ ಹಾಗೂ ಸಾಹಿತ್ಯ ಪರಿಷತ್ತಿನ ಜೊತೆ ಕೈಜೋಡಿಸಿ ಕರ್ನಾಟಕ ಸುವರ್ಣ ಸಂಭ್ರಮ ಕಾರ್ಯಕ್ರಮವನ್ನು ಸಂಭ್ರಮಿಸಬೇಕಾಗಿ ತಾಲೂಕು ಕನ್ನಡ ಸಾಹಿತ್ಯ ಪರಿಷತ್ ಅಧ್ಯಕ್ಷ ಪುತ್ತೂರು ಉಮೇಶ್ ನಾಯಕ್ ತಿಳಿಸಿದ್ದಾರೆ.