ವಿಧಾನಸಭಾ ಉಪಚುನಾವಣೆಗೆ ಬಿಜೆಪಿಯಿಂದ ಯುವ ನಾಯಕ ಕಿಶೋರ್ ಕುಮಾರ್ ಬೊಟ್ಯಾಡಿ ಅವರ ಹೆಸರನ್ನು ಘೋಷಣೆ ಮಾಡಲಾಗಿದೆ.
ದಕ್ಷಿಣ ಕನ್ನಡ ಸ್ಥಳೀಯಾಡಳಿತ ಸಂಸ್ಥೆಗಳ ಜನಪ್ರತಿನಿಧಿ ಸ್ಥಾನಕ್ಕೆ ಬಿಜೆಪಿಯಿಂದ ಕಿಶೋರ್ ಕುಮಾರ್ ಬೊಟ್ಯಾಡಿ ಅವರ ಹೆಸರು ಘೊಷಣೆ ಮಾಡಲಾಗಿದೆ.
ದಕ್ಷಿಣ ಕನ್ನಡ ಜಿಲ್ಲಾ ಬಿಜೆಪಿಯಲ್ಲಿ ಪ್ರಧಾನ ಕಾರ್ಯದರ್ಶಿಯಾಗಿ ಕಾರ್ಯನಿರ್ವಹಿಸುತ್ತಿರುವ ಕಿಶೋರ್ ಕುಮಾರ್ ಅವರು ಪುತ್ತೂರು ತಾಲೂಕಿನ ಸರ್ವೆ ಗ್ರಾಮದ ಬೊಟ್ಯಾಡಿ ನಿವಾಸಿಯಾಗಿದ್ದಾರೆ. ಕೋಟಾ ಅವರಿಂದ ತೆರವಾದ ಸ್ಥಾನಕ್ಕೆ ಉಪಚುನಾವಣೆ ನಡೆಯಲಿದೆ.