ಪುತ್ತೂರು: ಭಾರತೀಯ ಜನತಾ ಪಾರ್ಟಿ ಪುತ್ತೂರು ನಗರ ಮಂಡಲದ ವತಿಯಿಂದ ಸ್ವಚ್ಛತಾ ಕಾರ್ಯಕ್ರಮ ಮಂಗಳವಾರ ನಡೆಯಿತು.
ಭವ್ಯ ಭಾರತಕ್ಕಾಗಿ ಬದುಕು ಸಮರ್ಪಿಸಿದ ರಾಷ್ಟ್ರ ಕಂಡ ಹಿರಿಯ ಮುತ್ಸದಿ ಪಂಡಿತ್ ದೀನ್ ದಯಾಳ್ ಉಪಾಧ್ಯಾಯರು, ಲಾಲ್ ಬಹಾದ್ದೂರ್ ಶಾಸ್ತ್ರಿ, ಮಹಾತ್ಮ ಗಾಂಧಿ ಹಾಗೂ ಭಾರತವನ್ನು ಪರಮ ವೈಭವದೆಡಗೆ ಕೊಂಡೊಯ್ಯುವ ಸಂಕಲ್ಪದೊಂದಿಗೆ ರಾಷ್ಟ್ರ ಕಾರ್ಯವನ್ನು ಮಾಡುತ್ತಿರುವ ಪ್ರಧಾನ ಮಂತ್ರಿ ನರೇಂದ್ರ ಮೋದಿಯವರ ಜನ್ಮದಿನಚಾರಣೆಗಳ ಪ್ರಯುಕ್ತ ಸೇವಾ ಪಾಕ್ಷಿಕದ ಅಂಗವಾಗಿ ಮಹಾಲಿಂಗೇಶ್ವರ ದೇವಸ್ಥಾನದ ವಠಾರದಲ್ಲಿ ಹಾಗೂ ದೇವಸ್ಥಾನದ ದೇವರ ಕೆರೆ ಕಟ್ಟೆಯ ಬಳಿ ಸ್ವಚ್ಛತಾ ಕಾರ್ಯ ನಡೆಯಿತು.
ಈ ಸಂದರ್ಭದಲ್ಲಿ ಮಾಜಿ ಶಾಸಕ ಸಂಜೀವ ಮಠಂದೂರು, ಬಿಜೆಪಿ ನಗರ ಮಂಡಲ ಅಧ್ಯಕ್ಷ ಶಿವಕುಮಾರ್ ಪಿ.ಬಿ. ಕಲ್ಲಿಮಾರ್, ನಗರ ಸಭಾ ಅಧ್ಯಕ್ಷೆ ಲೀಲಾವತಿ ಕೃಷ್ಣನಗರ, ಮಾಜಿ ನಗರ ಸಭಾ ಅಧ್ಯಕ್ಷ ಜೀವಂಧರ್ ಜೈನ್, ಬಿಜೆಪಿ ನಗರ ಮಂಡಲ ಪ್ರಧಾನ ಕಾರ್ಯದರ್ಶಿ ನಾಗೇಶ್ ಪ್ರಭು, ಜಿಲ್ಲಾ ಪ್ರಶಿಕ್ಷಣ ಪ್ರಕೋಷ್ಠ ಸಂಚಾಲಕ ಚಂದ್ರಶೇಖರ್ ರಾವ್ ಬಪ್ಪಳಿಗೆ, ಬಿಜೆಪಿ ನಗರ ಮಂಡಲ ಉಪಾಧ್ಯಕ್ಷರಾದ ಯುವರಾಜ್ ಕೆ. ಪೆರಿಯತ್ತೋಡಿ, ವಸಂತಲಕ್ಷ್ಮಿ, ಬಿಜೆಪಿ ನಗರ ಮಂಡಲ ನಿಕಟಪೂರ್ವ ಪ್ರಧಾನ ಕಾರ್ಯದರ್ಶಿ ಜಯಶ್ರೀ ಎಸ್ ಶೆಟ್ಟಿ, ಬಿಜೆಪಿ ನಗರ ಮಂಡಲ ಮಹಿಳಾ ಮೋರ್ಚಾ ಅಧ್ಯಕ್ಷೆ ಸ್ವರ್ಣಲತಾ ಹೆಗ್ಡೆ, ಬಿಜೆಪಿ ನಗರ ಸಭಾ ಸದಸ್ಯರಾದ ಗೌರಿ ಬನ್ನೂರು, ದೀಕ್ಷಾ ಪೈ, ಮಹಿಳಾ ಮೋರ್ಚಾ ಜಿಲ್ಲಾ ಕಾರ್ಯಕಾರಿಣಿ ಸದಸ್ಯೆ ಜಯಶ್ರೀ ನಾಯ್ಕ್, ಬಿಜೆಪಿ ನಗರ ಮಂಡಲ ಮಹಿಳಾ ಮೋರ್ಚಾ ಪ್ರಧಾನ ಕಾರ್ಯದರ್ಶಿಗಳಾದ ಜಯಲಕ್ಷ್ಮಿ ಶಗ್ರಿತ್ತಾಯ, ಸುನಿತಾ, ಮಹಿಳಾ ಮೋರ್ಛ ಸದಸ್ಯರಾದ ಸುಮತಿ, ಸರೋಜಿನಿ, ಸುಪ್ರಭಾ, ಪೂರ್ಣಿಮಾ ಬಲ್ನಾಡು, ರಾಜೀವಿ ಕುಬಲಾಜೆ, ರವಿ ಸೇರಿದಂತೆ ಕಾರ್ಯಕರ್ತರು ಪಾಲ್ಗೊಂಡಿದ್ದರು.