ಕಡಬ: ತಾಲೂಕಿನ ಆಲಂಕಾರು ಗ್ರಾಮದ ಶರವೂರು ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನದಲ್ಲಿ ನವರಾತ್ರಿ ಉತ್ಸವ ಅ.2 ಬುಧವಾರದಿಂದ ಅ.12 ಶನಿವಾರದ ತನಕ ವಿವಿಧ ವೈದಿಕ ಹಾಗೂ ಸಾಂಸ್ಕೃತಿಕ ಕಾರ್ಯಕ್ರಮಗಳೊಂದಿಗೆ ಜರಗಲಿದೆ.
ಉತ್ಸವದ ಅಂಗವಾಗಿ ಅ.4 ಶುಕ್ರವಾರ ಬೆಳಿಗ್ಗೆ 8 ರಿಂದ ಸಾಮೂಹಿಕ ಚಂಡಿಕಾಯಾಗ, ಅ.11 ಹಾಗೂ 12 ರಂದು ಮಧ್ಯಾಹ್ನ 2 ರಿಂದ ಆಯುಧ ಪೂಜೆ ಜರಗಲಿದೆ.
ಅ.12 ಶನಿವಾರ ವಿಜಯದಶಮಿಯಂದು ಬೆಳಿಗ್ಗೆ 8 ರಿಂದ ಶ್ರೀ ಮಹಾಗಣಪತಿ ಹೋಮ, 9 ರಿಂದ ಅಕ್ಷರಾಭ್ಯಾಸ, ಮಧ್ಯಾಹ್ನ 12 ರಿಂದ ಮಹಾಪೂಜೆ, ಗಣಪತಿ ಮಹಾಪೂಜೆ, ಪ್ರಸಾದ ವಿತರಣೆಯಾಗಿ ಬಳಿಕ ನವಾನ್ನ ಸಂತರ್ಪಣೆ ಜರಗಲಿದೆ. ಪ್ರತೀ ದಿನ ಮಧ್ಯಾಹ್ನ ಅನ್ನಸಂತರ್ಪಣೆ ಜರಗಲಿದೆ. ರಂಗಪೂಜೆ ಮಾಡಿಸುವವರು ದೇವಾಲಯದ ಕೌಂಟರ್ ನಲ್ಲಿ ಹೆಸರು ನೊಂದಾಯಿಸಬಹುದು ಎಂದು ದೇವಸ್ಥಾನದ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.