ಮಂಗಳೂರು : ಗಾಂಜಾ ಮಾರಾಟ ಮಾಡುತ್ತಿದ್ದವನನ್ನು ಪತ್ತೆ ಹಚ್ಚಿ 4 ಕೆ.ಜಿ. ಗಾಂಜಾವನ್ನು ಆರೋಪಿಸಿಯಿಂದ ವಶಪಡಿಸಿಕೊಂಡ ಘಟನೆ ಮಂಗಳೂರಿನಲ್ಲಿ ನಡೆದಿದೆ.
ಬೆಳ್ತಂಗಡಿ ತಾಲೂಕಿನ ಕುಕ್ಕೇಡಿ ಗ್ರಾಮ ಗೋಳಿಯಂಗಡಿ ಹೌಸ್ ನಿವಾಸಿ ಅಬುತಾಹಿರ್ ಯಾನೇ ಅನ್ನಮ್ (25) ಬಂಧಿತ ಆರೋಪಿ,
ಗಾಂಜಾ ಮಾರಾಟ ಮಾಡುತ್ತಿದ್ದ ಬಗ್ಗೆ ಖಚಿತ ಮಾಹಿತಿ ಪಡೆದ ಮಂಗಳೂರು ಸಿಸಿಬಿ ಪೊಲೀಸರು ಕಂಕನಾಡಿ ನಗರ ಪೊಲೀಸ್ ಠಾಣಾ ವ್ಯಾಪ್ತಿಯ ಪಡೀಲ್ ಪರಿಸರದಲ್ಲಿ ವಾಹನವೊಂದರಲ್ಲಿ ಅಕ್ರಮವಾಗಿ ಮಾದಕ ವಸ್ತು ಗಾಂಜಾ ಮಾರಾಟ ಮಾಡುತ್ತಿದ್ದ ಅತನನ್ನು ವಶಕ್ಕೆ ಪಡೆದಿದ್ದಾರೆ.
ಆತನಿಂದ 1 ಲಕ್ಷ ರೂ. ಮೌಲ್ಯದ 4 ಕೆಜಿ ಗಾಂಜಾ, ದ್ವಿಚಕ್ರ ವಾಹನ ಮೊಬೈಲ್ ಫೋನ್ ಅನ್ನು ಸ್ವಾಧೀನಪಡಿಸಿಕೊಳ್ಳಲಾಗಿದೆ. ವಶಪಡಿಸಿಕೊಂಡ ಸೊತ್ತಿನ ಮೌಲ್ಯ 1.75 ಲಕ್ಷ ರೂ. ಎಂದು ಅಂದಾಜಿಸಲಾಗಿದೆ.