ನರೇಂದ್ರ ಪ.ಪೂ.ಕಾಲೇಜಿನಲ್ಲಿ ನವರಾತ್ರಿ ಆಚರಣೆ -ವಿಶೇಷ ಉಪನ್ಯಾಸ

ಪುತ್ತೂರು: ನವರಾತ್ರಿಯು ಒಂದು ಮಂಗಳಕರ ಹಿಂದೂ ಹಬ್ಬವಾಗಿದ್ದು, ಕೆಟ್ಟದ್ದರ ಮೇಲೆ ಒಳ್ಳೆಯದರ ವಿಜಯವನ್ನು ಸೂಚಿಸುತ್ತದೆ. ಶಕ್ತಿ, ಜ್ಞಾನ, ಸಂಪತ್ತು ಹೀಗೆ ಪ್ರತಿ ದಿನವೂ ಜೀವನದ ವಿವಿಧ ಭಾಗಗಳಲ್ಲಿ ದುರ್ಗೆಯ ಒಂಬತ್ತು ರೂಪಗಳನ್ನು ಸಂಕೇತಿಸುತ್ತದೆ ಒಂಬತ್ತು ದಿನಗಳ ಹಬ್ಬವು ಮಹತ್ತರವಾದ ಅರ್ಥವನ್ನು ಹೊಂದಿದೆ ಮತ್ತು ದೇಶಾದ್ಯಂತ ಆಚರಿಸಲು ಸುದೀರ್ಘ ಇತಿಹಾಸವನ್ನು ಹೊಂದಿದೆ ಎಂದು ವಿವೇಕಾನಂದ ಮಹಾವಿದ್ಯಾಲಯ(ಸ್ವಾಯತ್ತ) ಆಡಳಿತ ಮಂಡಳಿ ಸದಸ್ಯೆ ಶೋಭಾ ಸಿ. ಅಡಿಗ ಹೇಳಿದರು.

ನರೇಂದ್ರ ಪ.ಪೂ.ಕಾಲೇಜಿನಲ್ಲಿ ನಡೆದ ನವರಾತ್ರಿ ಆಚರಣೆ -ವಿಶೇಷ ಉಪನ್ಯಾಸ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.

ತಿರುಗುವುದು ಪೃಥ್ವಿಯ ಗುಣಧರ್ಮವಾಗಿದೆ. ಪೃಥ್ವಿಯು ತಿರುಗುತ್ತಿರುವುದರಿಂದ ಬದಲಾವಣೆಗಳು ಆಗುತ್ತಿರುತ್ತವೆ, ಅಂದರೆ ರಾತ್ರಿ ಮತ್ತು ಹಗಲು ಆಗುತ್ತವೆ. ಇಂತಹ ಬದಲಾವಣೆಗಳನ್ನು ಸಹಿಸುವ ಶಕ್ತಿಯು ಶರೀರದಲ್ಲಿರಬೇಕೆಂದು ವ್ರತಗಳನ್ನು ಮಾಡುತ್ತಾರೆ. ಜಗತ್ತಿನಲ್ಲಿ ಯಾವಾಗ ತಾಮಸಿಕ, ಅಸುರೀ ಮತ್ತು ಕ್ರೂರ ಜನರು ಪ್ರಬಲರಾಗಿ ಸಾತ್ವಿಕ ಮತ್ತು ಧರ್ಮನಿಷ್ಠ ಸಜ್ಜನರನ್ನು ಪೀಡಿಸುತ್ತಾರೆಯೋ ಆಗ ದೇವಿಯು ಧರ್ಮಸಂಸ್ಥಾಪನೆಗಾಗಿ ಪುನಃ ಪುನಃ ಅವತಾರ ತಾಳುತ್ತಾಳೆ ಎಂದು ಹೇಳಿದರು.































 
 

ವೇದಿಕೆಯಲ್ಲಿ ಕಾಲೇಜಿನ ಪ್ರಾಂಶುಪಾಲ ಪ್ರಸಾದ್ ಶ್ಯಾನಭಾಗ್ ಉಪಸ್ಥಿತರಿದ್ದರು. ವಿದ್ಯಾರ್ಥಿನಿಯಾದ ಹರಿಣಿ ಸ್ವಾಗತಿಸಿ, ವಂದಿಸಿದರು.

Leave a Comment

Your email address will not be published. Required fields are marked *

This site uses Akismet to reduce spam. Learn how your comment data is processed.

error: Content is protected !!
Scroll to Top