ಟ್ರ್ಯಾಕ್ಟರ್‌ಗೆ ಲಾರಿ ಡಿಕ್ಕಿ : 10 ಮಂದಿ ಸಾವು

ಲಖನೌ: : ಉತ್ತರ ಪ್ರದೇಶದ ಮಿರ್ಜಾಪುರ ಜಿಲ್ಲೆಯಲ್ಲಿ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ 10 ಮಂದಿ ಸಾವನ್ನಪ್ಪಿರುವ ಘಟನೆ ಶುಕ್ರವಾರ ಮುಂಜಾನೆ ನಡೆದಿದೆ. ಕಾರ್ಮಿಕರನ್ನು ತುಂಬಿದ್ದ ಟ್ರ್ಯಾಕ್ಟರ್ ಟ್ರಾಲಿಗೆ ಟ್ರಕ್ ಹಿಂಬದಿಯಿಂದ ಡಿಕ್ಕಿ ಹೊಡೆದಿದೆ. ಪರಿಣಾಮ ಅಪಘಾತದಲ್ಲಿ 10 ಮಂದಿ ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ.
ಘಟನೆಯಲ್ಲಿ ಮೂವರು ಗಂಭೀರವಾಗಿ ಗಾಯಗೊಂಡಿದ್ದಾರೆ. ಪೊಲೀಸರು ಸ್ಥಳಕ್ಕೆ ಧಾವಿಸಿ ಗಾಯಾಳುಗಳನ್ನು ಆಂಬ್ಯುಲೆನ್ಸ್‌ನಲ್ಲಿ ಆಸ್ಪತ್ರೆಗೆ ರವಾನಿಸಿದ್ದಾರೆ. ಮೃತಪಟ್ಟವರೆಲ್ಲರೂ ವಾರಾಣಸಿ ನಿವಾಸಿಗಳು ಎಂದು ತಿಳಿದುಬಂದಿದೆ.
ಗುರುವಾರ ರಾತ್ರಿ 1 ಗಂಟೆ ಸುಮಾರಿಗೆ ಮಿರ್ಜಾಪುರದ ಕಚವಾನ್ ಪ್ರದೇಶದ ಕಟ್ಕಾ ಗ್ರಾಮದ ಬಳಿ ವಾರಾಣಸಿ – ಪ್ರಯಾಗರಾಜ್ ರಾಷ್ಟ್ರೀಯ ಹೆದ್ದಾರಿಯಲ್ಲಿ, ದುರ್ಘಟನೆ ಸಂಭವಿಸಿದೆ ಎಂದು ಪೊಲೀಸ್ ವರಿಷ್ಠಾಧಿಕಾರಿ ಅಭಿನಂದನ್ ತಿಳಿಸಿದ್ದಾರೆ. ಅಪಘಾತದ ಬಳಿಕ ಲಾರಿ ಚಾಲಕ ವಾಹನ ಬಿಟ್ಟು ಓಡಿ ಹೋಗಿದ್ದಾನೆ.

Leave a Comment

Your email address will not be published. Required fields are marked *

This site uses Akismet to reduce spam. Learn how your comment data is processed.

error: Content is protected !!
Scroll to Top