ಪುತ್ತೂರು: ಇದುವರೆಗಿನ ನನ್ನ ಆಡಳಿತದಲ್ಲಿ ನನ್ನ ಮೇಲೆ ಒಂದೇ ಒಂದು ಭ್ರಷ್ಟಾಚಾರದ ಕಪ್ಪು ಚುಕ್ಕಿ ಇಲ್ಲಾ ಎಂದು ಬಡಾಯಿಕೊಚ್ಚಿಕೊಳ್ಳುತ್ತಿದ್ದ ರಾಜ್ಯದ ಮುಖ್ಯಮಂತ್ರಿ ಸಿದ್ಧರಾಮಯ್ಯ ಅವರ ಬಟ್ಟೆಯಿಡೀ ಕಪ್ಪುಚುಕ್ಕೆಯಿಂದ ಕಪ್ಪಾಗಿದ್ದು, ಬಿಳಿ ಚುಕ್ಕೆ ಹುಡುಕುವ ಪರಿಸ್ಥಿತಿ ಬಂದಿದೆ. ಇನ್ನಾದರೂ ಸಿದ್ಧರಾಮಯ್ಯ ತನ್ನ 40 ವರ್ಷದ ರಾಜಕೀಯ ಆಡಳಿತ ನೋಡಿಕೊಂಡು ನಮ್ಮ ನೆಲದ ಸಂಸ್ಕೃತಿ ಆಧಾರದಲ್ಲಿ ಗೌರವ ನೀಡಿ ರಾಜೀನಾಮೆ ನೀಡಬೇಕು ಎಂದು ದ.ಕ. ಜಿಲ್ಲಾ ಸಂಸದ ಕ್ಯಾ.ಬ್ರಿಜೇಶ್ ಚೌಟ ಆಗ್ರಹಿಸಿದರು.
ಪುತ್ತೂರು ಬಿಜೆಪಿ ಕಚೇರಿಯಲ್ಲಿ ಶನಿವಾರ ನಡೆದ ಪತ್ರಿಕಾಗೋಷ್ಠಿಯಲ್ಲಿ ಅವರು ಮಾತನಾಡಿ, ದಲಿತರ, ಹಿಂದುಳಿದವರ ಭೂಮಿಯನ್ನು ನುಂಗಿರುವ ಕಾಂಗ್ರೆಸ್ ನಾಯಕರು ಕರ್ನಾಟಕದ ಇತಿಹಾದಲ್ಲಿ ಅತ್ಯಂತ ಭ್ರಷ್ಟ ಆಡಳಿತವನ್ನು ಕಾಂಗ್ರೆಸ್ ಸರಕಾರ ಮಾಡುತ್ತಿದೆ. ಮುಖ್ಯಮಂತ್ರಿ ಸಿದ್ಧರಾಮಯ್ಯರಿಂದ ಕಾಂಗ್ರೆಸ್ ನಾಯಕರು ಸಂವಿಧಾನಕ್ಕೆ ಗೌರವ ನೀಡದೇ ಎಲ್ಲೆಂದರಲ್ಲಿ ಬಾಯಿಗೆ ಬಂದ ಹಾಗೆ ಮಾತನಾಡುವ ಪರಿಸ್ಥಿತಿಯನ್ನು ಸಿದ್ಧರಾಮಯ್ಯ ಅವರು ಸೃಷ್ಟಿಸಿದ್ದಾರೆ. ಗೌರವಾನ್ವಿತ ರಾಜ್ಯಪಾಲರ ಕುರಿತು ಅವಹೇಳನಕಾರಿಯಾಗಿ ಮಾತನಾಡುವ ಮೂಲಕ ಪಾಕಿಸ್ತಾನ, ಬಾಂಗ್ಲಾ ಪ್ರೇರಿತ ರಾಜಕಾರಣ ಮಾಡುತ್ತಿದ್ದಾರೆ ಎಂದು ಆರೋಪಿಸಿದ ಅವರು ಬಿಜೆಪಿ ಸನಾತನ ಪ್ರೇರಣೆಯ ಅಡಿಯಲ್ಲಿ ದೇಶದ ಸಂವಿಧಾನಕ್ಕೆ ಗೌರವ ನೀಡಿ ಆಡಳಿತ ನಡೆಸುತ್ತಿದೆ ಎಂದು ಹೇಳಿದರು.
ಪತ್ರಿಕಾಗೋಷ್ಠಿಯಲ್ಲಿ ಮಾಜಿ ಶಾಸಕ ಸಂಜೀವ ಮಠಂದೂರು, ನಗರ ಮಂಡಲ ಅಧ್ಯಕ್ಷ ಪಿ.ಬಿ.ಶಿವಕುಮಾರ್, ಗ್ರಾಮಾಂತರ ಮಂಡಲ ಅಧ್ಯಕ್ಷ ದಯಾನಂದ ಶೆಟ್ಟಿ ಉಜಿರೆಮಾರು, ಬಿಜೆಪಿ ಜಿಲ್ಲಾ ನಾಯಕ ಪ್ರಸನ್ನ ಕುಮಾರ್ ಮಾರ್ತ, ಸುನಿಲ್, ನಗರಸಭೆ ಅಧ್ಯಕ್ಷೆ ಲೀಲಾವತಿ ಉಪಸ್ಥಿತರಿದ್ದರು.