ಹರ್ಯಾಣದಲ್ಲಿ ಇಂದು ಮತದಾನ

ಬಿಜೆಪಿ-ಕಾಂಗ್ರೆಸ್‌ ಜಿದ್ದಾಜಿದ್ದಿ ಹೋರಾಟದ ಕಣ

ಚಂಡೀಗಢ: 90 ಸದಸ್ಯ ಬಲದ ಹರ್ಯಾಣ ವಿಧಾನಸಭಾ ಚುನಾವಣೆ ಮತದಾನ ಪ್ರಕ್ರಿಯೆ ಶನಿವಾರ ಬೆಳಗ್ಗಿನಿಂದ ಆರಂಭವಾಗಿದ್ದು, ಮುಖ್ಯಮಂತ್ರಿ ನಯಾಬ್ ಸಿಂಗ್ ಸೈನಿ, ಕಾಂಗ್ರೆಸ್‌ನ ಭೂಪಿಂದರ್ ಸಿಂಗ್ ಹೂಡಾ ಮತ್ತು ಕುಸ್ತಿಪಟು ವಿನೇಶ್ ಫೋಗಟ್, ಬಿಜೆಪಿಯ ದುಶ್ಯಂತ್ ಚೌಟಾಲಾ ಸೇರಿ 1031 ಮಂದಿ ಅಭ್ಯರ್ಥಿಗ ಭವಿಷ್ಯ ನಿರ್ಧಾರವಾಗಲಿದೆ.
ಆಡಳಿತಾರೂಢ ಬಿಜೆಪಿ ರಾಜ್ಯದಲ್ಲಿ ಹ್ಯಾಟ್ರಿಕ್ ಗೆಲುವಿನ ನಿರೀಕ್ಷೆಯಲ್ಲಿದ್ದು, ದಶಕದ ನಂತರ ಕಾಂಗ್ರೆಸ್ ಪುನರಾಗಮನದ ತವಕಲ್ಲಿದೆ. ಅ.8ರಂದು ಮತ ಎಣಿಕೆ ನಡೆಯಲಿದೆ.
8,821 ಶತಾಯುಷಿಗಳು ಸೇರಿ 2,03,54,350 ಮತದಾರರಿದ್ದಾರೆ. 101 ಮಹಿಳೆಯರು ಸೇರಿ 1,031 ಅಭ್ಯರ್ಥಿಗಳು ಕಣಕ್ಕಿಳಿದಿದ್ದಾರೆ, ಈ ಪೈಕಿ 464 ಅಭ್ಯರ್ಥಿಗಳು ಪಕ್ಷೇತರರಿದ್ದಾರೆ. ಮತದಾನಕ್ಕಾಗಿ ರಾಜ್ಯದಲ್ಲಿ 20,632 ಮತಗಟ್ಟೆ ಸ್ಥಾಪಿಸಲಾಗಿದೆ. ಬಿಜೆಪಿ, ಕಾಂಗ್ರೆಸ್,ಎಎಪಿ, ಐಎನ್ಎಲ್’ಡಿ-ಬಿಎಸ್‌ಪಿ ಮತ್ತು ಜೆಜೆಪಿ-ಆಜಾದ್ ಸಮಾಜ ಪಕ್ಷ ಕಣದಲ್ಲಿರುವ ರಾಜಕೀಯ ಪಕ್ಷಗಳಾಗಿವೆ.
2019ರ ವಿಧಾನಸಭಾ ಚುನಾವಣೆಯಲ್ಲಿ ಬಿಜೆಪಿ 40, ಕಾಂಗ್ರೆಸ್ ಮತ್ತು ಜೆಜೆಪಿ 10 ಸ್ಥಾನ ಗೆದ್ದಿದ್ದವು. ಬಿಜೆಪಿಗೆ ಬಹುಮತ ಬಾರದ ಕಾರಣ ಜೆಜೆಪಿ ಬೆಂಬಲ ನೀಡಿತ್ತು. ಈ ಸಲ ಬಿಜೆಪಿ ಹಾಗೂ ಜೆಜೆಪಿ ಮೈತ್ರಿ ಮುರಿದುಕೊಂಡು ಪ್ರತ್ಯೇಕವಾಗಿ ಕಣಕ್ಕಿಳಿದಿವೆ.
ಇಂದು ಸಂಜೆ ಹರ್ಯಾಣ ಮತ್ತು ಜಮ್ಮು-ಕಾಶ್ಮೀರ ವಿಧಾನಸಭೆಯ ಚುನಾವಣೋತ್ತರ ಸಮೀಕ್ಷೆಗಳು ಪ್ರಕಟವಾಗಲಿವೆ ಎಂದು ವರದಿಗಳು ತಿಳಿಸಿವೆ. ಜಮ್ಮು-ಕಾಶ್ಮೀರದಲ್ಲಿ 3 ಹಂತದಲ್ಲಿ ಸೆ.18, 25 ಮತ್ತು ಅ.1 ರಂದು ಚುನಾವಣೆ ನಡೆದಿತ್ತು.

Leave a Comment

Your email address will not be published. Required fields are marked *

This site uses Akismet to reduce spam. Learn how your comment data is processed.

error: Content is protected !!
Scroll to Top