ಸುಬ್ರಹ್ಮಣ್ಯ: ಕುಕ್ಕೆ ಶ್ರೀ ಸುಬ್ರಹ್ಮಣ್ಯೇಶ್ವರ ಮಹಾವಿದ್ಯಾಲಯ ಆಂತರಿಕ ಗುಣಮಟ್ಟ ಭರವಸಾ ಕೋಶದ ಸಹಯೋಗದೊಂದಿಗೆ ವಿದ್ಯಾರ್ಥಿ ಪರಿಷತ್ತಿನ ಉದ್ಘಾಟನಾ ಕಾರ್ಯಕ್ರಮ ನಡೆಯಿತು.
ಮಂಗಳೂರು ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಕಾನೂನು ಕಾಲೇಜಿನ ಸಹಾಯಕ ಪ್ರಾಧ್ಯಾಪಕ ಪ್ರೊ. ಪುಷ್ಪರಾಜ್ ಕೆ. ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿ, ವಿದ್ಯಾರ್ಥಿಗಳು ಅಂಕಗಳಿಗೆ ಮಾತ್ರ ಸೀಮಿತವಾಗಿರದೆ ಜೀವನಕ್ಕೆ ಬೇಕಾದ ಕೌಶಲ್ಯಗಳನ್ನು ರೂಡಿಸಿಕೊಳ್ಳಬೇಕೆಂದು ಹೇಳಿದರು.
ಕಾಲೇಜಿನ ಪ್ರಾಂಶುಪಾಲ ಡಾ. ದಿನೇಶ ಪಿ.ಟಿ ಸಮಾರಂಭದ ಅಧ್ಯಕ್ಷತೆ ವಹಿಸಿದ್ದರು.
ಕಾರ್ಯಕ್ರಮದಲ್ಲಿ ಆಂತರಿಕ ಗುಣಮಟ್ಟ ಭರವಸಾ ಕೋಶದ ಸಂಯೋಜಕಿ ಲತಾ ಬಿ.ಟಿ., ವಿದ್ಯಾರ್ಥಿ ಪರಿಷತ್ತಿನ ಸಂಯೋಜಕರಾದ ಅಶ್ವಿನಿ, ಶಿವಪ್ರಸಾದ್, ವಿದ್ಯಾರ್ಥಿ ಪರಿಷತ್ತಿನ ಅಧ್ಯಕ್ಷ ದಿಶಾಂತ್, ಉಪಾಧ್ಯಕ್ಷೆ ಕಲ್ಪನಾ ವೈ., ಕಾರ್ಯದರ್ಶಿ ಕಾರ್ತಿಕ್ ಉಪಸ್ಥಿತರಿದ್ದರು. ವಿದ್ಯಾರ್ಥಿ ಪರಿಷತ್ತಿನ ಸಂಯೋಜಕ ಶಿವಪ್ರಸಾದ್ ಪ್ರತಿಜ್ಞಾ ವಿಧಿ ಸ್ವೀಕರಿಸಿದರು. ಕಾರ್ಯಕ್ರಮದಲ್ಲಿ ಮಹಿಳಾ ಕಮ್ಮಾರ ಲೀಲಾವತಿ ಗುತ್ತಿಗಾರು ಅವರನ್ನು ಸನ್ಮಾನಿಸಲಾಯಿತು.
ವಿದ್ಯಾರ್ಥಿ ಪರಿಷತ್ತಿನ ಸಂಯೋಜಕ ಡಾ. ಪ್ರಸಾದ ಎನ್. ಸ್ವಾಗತಿಸಿ, ದಿಶಾಂತ್ ವಂದಿಸಿದರು. ಸಂಜನಾ, ಸಂಖ್ಯಾ ನಿರೂಪಿಸಿದರು.