ಹರ್ಯಾಣ, ಜಮ್ಮು-ಕಾಶ್ಮೀರದಲ್ಲಿ ಕಾಂಗ್ರೆಸ್‌ ಭರ್ಜರಿ ಮುನ್ನಡೆ

ಕಾಂಗ್ರೆಸ್‌ ಕಾರ್ಯಕರ್ತರ ಸಂಭ್ರಮಾಚರಣೆ ಶುರು

ಹೊಸದಿಲ್ಲಿ: ಜಮ್ಮು ಮತ್ತು ಕಾಶ್ಮೀರ ಹಾಗೂ ಹರ್ಯಾಣ ರಾಜ್ಯಗಳ ವಿಧಾನಸಭೆ ಚುನಾವಣಾ ಮತ ಎಣಿಕೆ ನಡೆಯುತ್ತಿದ್ದು, ಎರಡೂ ರಾಜ್ಯಗಳಲ್ಲಿ ಕಾಂಗ್ರೆಸ್‌ ಭರ್ಜರಿ ಆರಂಭಿಕ ಮುನ್ನಡೆ ಸಾಧಿಸಿದೆ. ಈ ಬೆನ್ನಲ್ಲೇ ಹರ್ಯಾಣದಲ್ಲಿ ಕಾಂಗ್ರೆಸ್‌ ಕಾರ್ಯಕರ್ತರು ಸಂಭ್ರಮಾಚರಣೆ ಪ್ರಾರಂಭಿಸಿದ್ದಾರೆ.

ಬೆಳಗ್ಗೆ 9ರ ವೇಳೆಗೆ ಹರ್ಯಾಣದಲ್ಲಿ ಕಾಂಗ್ರೆಸ್‌ 62, ಬಿಜೆಪಿ 23, ಐಎನ್‌ಎಲ್‌ಡಿ 1, ಜೆಜೆಪಿ 1 ಹಾಗೂ ಇತರ ಪಕ್ಷಗಳು 2 ಸ್ಥಾನಗಳಲ್ಲಿ ಮುನ್ನಡೆ ಸಾಧಿಸಿವೆ.
ಜಮ್ಮು ಮತ್ತು ಕಾಶ್ಮೀರದಲ್ಲಿ ಕಾಂಗ್ರೆಸ್‌ ಮತ್ತು ಎನ್‌ಸಿ ಮೈತ್ರಿಕೂಟ 49, ಬಿಜೆಪಿ 27, ಪಿಡಿಪಿ 5 ಹಾಗೂ ಇತರ ಪಕ್ಷಗಳು 4 ಸ್ಥಾನಗಳಲ್ಲಿ ಮುನ್ನಡೆ ಸಾಧಿಸಿವೆ.



































 
 

ಚುನಾವಣೋತ್ತರ ಫಲಿತಾಂಶಗಳು ಈ ಬಾರಿ ಹರ್ಯಾಣದಲ್ಲಿ ಕಾಂಗ್ರೆಸ್‌ ಹಾಗೂ ಜಮ್ಮು ಮತ್ತು ಕಾಶ್ಮೀರದಲ್ಲಿ ಕಾಂಗ್ರೆಸ್‌ ನೇತೃತ್ವದ ಮೈತ್ರಿಕೂಟಕ್ಕೆ ಅಧಿಕಾರ ಎಂದು ಭವಿಷ್ಯ ನುಡಿದಿದ್ದು, ಆರಂಭದ ಹಂತದಲ್ಲಿ ಇದು ನಿಜವಾಗುವ ಸಾಧ್ಯತೆ ಗೋಚರಿಸುತ್ತಿದೆ. ಹರ್ಯಾಣದಲ್ಲಿ 10 ವರ್ಷದಿಂದ ಆಡಳಿತ ನಡೆಸುತ್ತಿರುವ ಬಿಜೆಪಿ ಪ್ರಬಲ ಆಡಳಿತ ವಿರೋಧಿ ಅಲೆ ಎದುರಿಸುತ್ತಿದೆ. ಉಭಯ ರಾಜ್ಯಗಳಲ್ಲಿ ತಲಾ 90 ವಿಧಾನಸಭಾ ಕ್ಷೇತ್ರಗಳಿದ್ದು, ಸರಳ ಬಹುಮತಕ್ಕೆ 46 ಸ್ಥಾನಗಳ ಅಗತ್ಯವಿದೆ.
2019ರ ಅಸೆಂಬ್ಲಿ ಚುನಾವಣೆಯಲ್ಲಿ ಹರ್ಯಾಣದ 90 ಸ್ಥಾನಗಳಲ್ಲಿ ಬಿಜೆಪಿ 40, ಕಾಂಗ್ರೆಸ್ 31 ಮತ್ತು ಜನನಾಯಕ ಜನತಾ ಪಕ್ಷ (ಜೆಜೆಪಿ) 10 ಸ್ಥಾನಗಳನ್ನು ಗೆದ್ದಿದ್ದವು. ಜೆಜೆಪಿ ಬೆಂಬಲದೊಂದಿಗೆ ಬಿಜೆಪಿ ಸರ್ಕಾರ ರಚಿಸಿತ್ತು. ಮಾರ್ಚ್‌ನಲ್ಲಿ ಬಿಜೆಪಿ ಮನೋಹರ್ ಲಾಲ್ ಖಟ್ಟರ್ ಬದಲಿಗೆ ನಯಾಬ್ ಸಿಂಗ್ ಸೈನಿ ಅವರನ್ನು ಮುಖ್ಯಮಂತ್ರಿಯಾಗಿ ನೇಮಿಸಿದ ನಂತರ ಮೈತ್ರಿ ಕೊನೆಗೊಂಡಿತ್ತು. ಇದೀಗ ಹ್ಯಾಟ್ರಿಕ್‌ ಗೆಲುವು ಸಾಧಿಸುವ ಮೂಲಕ ಬಿಜೆಪಿ ವಿಶ್ವಾಸ ಭಗ್ನಗೊಳ್ಳಲಿದೆ ಎಂದು ಆರಂಭಿಕ ಟ್ರೆಂಡ್‌ಗಳು ಹೇಳುತ್ತಿವೆ.

Leave a Comment

Your email address will not be published. Required fields are marked *

This site uses Akismet to reduce spam. Learn how your comment data is processed.

error: Content is protected !!
Scroll to Top