ಬಿಜೆಪಿಗೆ ಅಲ್ಪ ಮುನ್ನಡೆ
ಹೊಸದಿಲ್ಲಿ: ಹರ್ಯಾಣದಲ್ಲಿ ಹಾವು-ಏಣಿ ಆಟ ಆರಂಭವಾಗಿದೆ. ಆರಂಭದಲ್ಲಿ ಕಾಂಗ್ರೆಸ್ ಮುನ್ನಡೆಯಲ್ಲಿದ್ದರೆ ಈಗ ಬಿಜೆಪಿ ಮುನ್ನಡೆ ಸಾಧಿಸಿದೆ.
ಬೆಳಗ್ಗಿನ 9 ಗಂಟೆಯ ಟ್ರೆಂಡ್ ವೇಳೆ ಕಾಂಗ್ರೆಸ್ ಮುನ್ನಡೆಯಲ್ಲಿತ್ತು. ಆದರೆ 10 ಗಂಟೆಯ ಟ್ರೆಂಡ್ಗಾಗುವಾಗ ಬಿಜೆಪಿ ಮುನ್ನಡೆ ಸಾಧಿಸಿದೆ. ಸದ್ಯ ಬಿಜೆಪಿ 46 ಕ್ಷೇತ್ರಗಳಲ್ಲಿ ಮುನ್ನಡೆ ಸಾಧಿಸಿದರೆ ಕಾಂಗ್ರೆಸ್ 41 ಇತರರು 3 ಕ್ಷೇತ್ರಗಳಲ್ಲಿ ಮುನ್ನಡೆ ಸಾಧಿಸಿದ್ದಾರೆ.
ಹರ್ಯಾಣದಲ್ಲಿ ಒಟ್ಟು 90 ಕ್ಷೇತ್ರಗಳಿದ್ದು ಬಹುಮತಕ್ಕೆ 46 ಸ್ಥಾನಗಳ ಅಗತ್ಯವಿದೆ. ಜಮ್ಮು-ಕಾಶ್ಮೀರದಲ್ಲಿ ಕಾಂಗ್ರೆಸ್ ನೇತೃತ್ವದ ಇಂಡಿ ಒಕ್ಕೂಟ ಅಲ್ಪ ಮುನ್ನಡೆಯಲ್ಲಿದೆ.