ಅಧಿಕಾರಕ್ಕೇರುವ ಹುಮ್ಮಸ್ಸಿನಲ್ಲಿ ಕಾಂಗ್ರೆಸ್ ಮೈತ್ರಿಕೂಟ
ಹೊಸದಿಲ್ಲಿ: ಜಮ್ಮು ಮತ್ತು ಕಾಶ್ಮೀರ ಹಾಗೂ ಹರ್ಯಾಣ ವಿಧಾನಸಭೆ ಚುನಾವಣಾ ಫಲಿತಾಂಶ ಈಂದು ಪ್ರಕಟವಾಗಲಿದೆ. ಮತ ಎಣಿಕೆಗೆ ವ್ಯವಸ್ಥೆ ಮಾಡಿಕೊಳ್ಳಲಾಗಿದ್ದು, ಬೆಳಗ್ಗೆ 8 ಗಂಟೆಗೆ ಎಣಿಕೆ ಪ್ರಕ್ರಿಯೆ ಶುರುವಾಗಿದೆ. ಮಂಗಳವಾರ (ಅ.8) ಹೊರಬೀಳಲಿದೆ.
ಜಮ್ಮು-ಕಾಶ್ಮೀರದಲ್ಲಿ ಆರ್ಟಿಕಲ್ 370 ರದ್ದಾದ ಬಳಿಕ ನಡೆದ ಮೊದಲ ವಿಧಾನಸಭಾ ಚುನಾವಣೆಯಾಗಿರುವುದರಿಂದ ಫಲಿತಾಂಶದ ಕುರಿತು ದೇಶಾದ್ಯಂತ ಭಾರಿ ಕುತೂಹಲವಿದೆ. ಬಿಜೆಪಿನಾ, ಎನ್‌ಸಿ-ಕಾಂಗ್ರೆಸ್ ಮೈತ್ರಿಕೂಟನಾ, ಪಿಡಿಪಿಇಲ್ಲಿನ ಕಣದಲ್ಲಿರುವ ಪ್ರಮುಖ ಪಕ್ಷಗಳು.
ಜಮ್ಮು- ಕಾಶ್ಮೀರದ 28 ಮತ ಎಣಿಕೆ ಕೇಂದ್ರಗಳಿಗೆ ಅತ್ಯಂತ ಬಿಗು ಭದ್ರತಾ ವ್ಯವಸ್ಥೆ ಮಾಡಲಾಗಿದೆ.
ಚುನಾವಣೋತ್ತರ ಸಮೀಕ್ಷೆಗಳು ಎರಡೂ ರಾಜ್ಯಗಳಲ್ಲಿ ಕಾಂಗ್ರೆಸ್ ನೇತೃತ್ವದ ಇಂಡಿ ಮೈತ್ರಿಕೂಟಕ್ಕೆ ಅಧಿಕಾರ ಸಿಗುವ ಸಾಧ್ಯತೆ ಕುರಿತು ಭವಿಷ್ಯ ನುಡಿದಿವೆ.
ಇಂಡಿ ಕೂಟ ಮೆಹಬೂಬಾ ಮುಫ್ತಿಯ ಪಿಡಿಪಿ ಬೆಂಬಲ ಪಡೆದು ಸರಕಾರ ರಚಿಸುವ ನಿರೀಕ್ಷೆಯಲ್ಲಿದೆ.
ಹರ್ಯಾಣದಲ್ಲಿ ಕಳೆದ 10 ವರ್ಷಗಳಿಂದ ಆಡಳಿತದಲ್ಲಿರುವ ಬಿಜೆಪಿ ಬಲವಾದ ಆಡಳಿತ ವಿರೋಧಿ ಅಲೆಯನ್ನು ಎದುರಿಸುತ್ತಿದೆ. ಇಲ್ಲಿ ಇಂಡಿ ಮೈತ್ರಿಕೂಟ ನಿಚ್ಚಳ ಬಹುಮತ ಪಡೆಯಲಿದೆ ಎಂದು ಹೆಚ್ಚಿನೆಲ್ಲ ಸಮೀಕ್ಷೆಗಳು ಭವಿಷ್ಯ ನುಡಿದಿವೆ.