ಸವಣೂರು: ನಾಡ ಹಬ್ಬ ದಸರ ಮಹೋತ್ಸವದ ಅಂಗವಾಗಿ ವಿದ್ಯಾರಶ್ಮಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಶಾರದ ಪೂಜೆ ಹಾಗೂ ಗ್ರಂಥಾಲಯವನ್ನು ನೂತನ ಕೊಠಡಿಗೆ ಸ್ಥಳಾಂತರಿಸಿ ಉದ್ಘಾಟಿಸುವ ಕಾರ್ಯಕ್ರಮ ನಡೆಯಿತು.
ಈ ಸಂದರ್ಭದಲ್ಲಿ ವಿದ್ಯಾರಶ್ಮಿ ಸಮೂಹ ಶಿಕ್ಷಣ ಸಂಸ್ಥೆಗಳ ಸಂಚಾಲಕರಾದ ಸವಣೂರು ಸೀತಾರಾಮ ರೈ ಕೆ., ಆಡಳಿತಾಧಿಕಾರಿಗಳಾದ ಇಂಜಿನಿಯರ್ ಅಶ್ವಿನ್ ಎಲ್ ಶೆಟ್ಟಿ, ಪ್ರಾಂಶುಪಾಲರಾದ ಡಾ.ನಾರಾಯಣ ಮೂರ್ತಿ ಕೆ., ಉಪಪ್ರಾಂಶುಪಾಲರಾದ ಶೇಷಗಿರಿ ಎಂ., ಸಿಬ್ಬಂಧಿ ವರ್ಗ ಹಾಗೂ ವಿದ್ಯಾರ್ಥಿವೃಂದದವರು ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು.
ಪೂಜಾ ಕಾರ್ಯಕ್ರಮವು ಪುರೋಹಿತ ವಿಷ್ಣುಮೂರ್ತಿ ಬಡಕಿಲ್ಲಾಯ ಅವರ ನೇತೃತ್ವದಲ್ಲಿ ನಡೆಯಿತು. ಈಸಂದರ್ಭದಲ್ಲಿ ಭಜನಾ ಕಾರ್ಯಕ್ರಮವು ನೆರವೇರಿತು.