ಉಗ್ರರು ಅಪಹರಿಸಿದ್ದ ಯೋಧನ ಮೃತದೇಹ ಪತ್ತೆ

ಶ್ರೀನಗರ: ಜಮ್ಮು ಮತ್ತು ಕಾಶ್ಮೀರದ ಅನಂತನಾಗ್ ಜಿಲ್ಲೆಯಲ್ಲಿ ಬುಧವಾರ ಉಗ್ರರು ಅಪಹರಿಸಿದ್ದ ಯೋಧನ ಮೃತದೇಹವನ್ನು ಭದ್ರತಾ ಪಡೆಗಳು ಪತ್ತೆ ಹಚ್ಚಿವೆ.

ಟೆರಿಟೋರಿಯಲ್ ಆರ್ಮಿಯ ಹಿಲಾಲ್ ಅಹ್ಮದ್ ಭಟ್ ಅವರ ಮೃತದೇಹವನ್ನು ಅನಂತನಾಗ್‌ನ ಉತ್ರಾಸೂ ಪ್ರದೇಶದ ಸಾಂಗ್ಲಾನ್ ಅರಣ್ಯ ಪ್ರದೇಶದಲ್ಲಿ ಸಿಕ್ಕಿದೆ ಎಂದು ಸೇನೆ ತಿಳಿಸಿದೆ. ದಕ್ಷಿಣ ಕಾಶ್ಮೀರದ ಕೋಕರ್‌ನಾಗ್ ಅರಣ್ಯದಲ್ಲಿ ರಾತ್ರೋರಾತ್ರಿ ನಡೆದ ಉಗ್ರ ನಿಗ್ರಹ ಕಾರ್ಯಾಚರಣೆಯ ಸಂದರ್ಭದಲ್ಲಿ ಇಬ್ಬರು ಯೋಧರನ್ನು ಉಗ್ರರು ಅಪಹರಿಸಿದ್ದರು. ಅವರಲ್ಲಿ ಓರ್ವ ಎರಡು ಗುಂಡೇಟು ತಿಂದರೂ ಉಗ್ರರ ಕೈಯಿಂದ ತಪ್ಪಿಸಿಕೊಂಡು ಬಂದಿದ್ದರು. ಅಹ್ಮದ್‌ ಭಟ್‌ ಅವರನ್ನು ಉಗ್ರರು ಸಾಯಿಸಿದ್ದಾರೆ.

ಗುಪ್ತಚರ ಮಾಹಿತಿಯ ಆಧಾರದ ಮೇಲೆ ಅಕ್ಟೋಬರ್ 8ರಂದು ಕಜ್ವಾನ್ ಅರಣ್ಯದಲ್ಲಿ ಜಮ್ಮು ಮತ್ತು ಕಾಶ್ಮೀರ ಪೊಲೀಸರು ಮತ್ತು ಭದ್ರತಾ ಪಡೆ ಕಾರ್ಯಾಚರಣೆ ನಡೆಸುತ್ತಿರುವಾಗ ಅನಂತನಾಗ್‌ನ ಅರಣ್ಯ ಪ್ರದೇಶದಿಂದ ಇಬ್ಬರು ಸೈನಿಕರನ್ನು ಅಪಹರಿಸಲಾಗಿತ್ತು.

































 
 

Leave a Comment

Your email address will not be published. Required fields are marked *

This site uses Akismet to reduce spam. Learn how your comment data is processed.

error: Content is protected !!
Scroll to Top