ಪುತ್ತೂರು : ಮಿನಿ ಬಸ್ಸೊಂದು ಚಾಲಕನ ನಿಯಂತ್ರಣ ತಪ್ಪಿ ರಸ್ತೆ ಬದಿಯ ಪ್ರಪಾತಕ್ಕೆ ವಾಲಿದ ಘಟನೆ ಬೊಳುವಾರಿನ ಪೈಪಾಸ್ ರಸ್ತೆಯಲ್ಲಿ ಇಂದು ನಡೆದಿದೆ.
ಮಂಗಳೂರು ಕಡೆ ಚಲಿಸುತ್ತಿದ್ದ ಮಿನಿ ಬಸ್ ಬೈಪಾಸ್ ಮಾರ್ಗವಾಗಿ ಮಂಗಳೂರು ಕಡೆ ಹೋಗುತ್ತಿತ್ತು. ಬೈಪಾಸ್ ರಸ್ತೆಯ ಬೊಳುವಾರು ಮಂಜಲ್ಪಡು ಮಧ್ಯೆ ನಿಯಂತ್ರಣ ತಪ್ಪಿ ರಸ್ತೆ ಬದಿಯ ಪ್ರಪಾತಕ್ಕೆ ವಾಲಿದ್ದು, ರಸ್ತೆ ಬದಿಯಲ್ಲಿದ್ದ ತಡೆ ಬೇಲಿಗೆ ಡಿಕ್ಕಿಯಾಗಿ ನಿಂತಿದೆ.
ಬಸ್ ನಲ್ಲಿದ್ದ ಪ್ರಯಾಣಿಕರು ಅಪಾಯದಿಂದ ಪಾರಾಗಿದ್ದಾರೆ ಎನ್ನಲಾಗಿದೆ.
























