ಮಂಗಳೂರು: ವಿಧಾನ ಪರಿಷತ್ತಿನ ಉಪಚುನಾವಣೆಯ ಮಂಗಳೂರು ವಿಧಾನಸಭಾ ಕ್ಷೇತ್ರದ ಚುನಾವಣಾ ಪ್ರಚಾರ ಸಭೆ ಇಂದು ಮಂಗಳೂರಿನ ಅಸೈಗೋಳಿ ಬಂಟರ ಭವನದಲ್ಲಿ ನಡೆಯಿತು.
ಸಭೆಯನ್ನುದ್ದೇಶಿಸಿ ಸಂಸದ ಬ್ರಿಜೇಶ್ ಚೌಟ ಮಾತನಾಡಿ,, ಯುವ ನಾಯಕನಿಗೆ, ಅತ್ಯಂತ ಹಿಂದುಳಿದ ಜಾತಿಯ ಬಿಜೆಪಿ ಕಾರ್ಯಕರ್ತನಿಗೆ ಪಕ್ಷ ಟಿಕೆಟ್ ನೀಡಿದೆ, ನಾವೆಲ್ಲರೂ ಸೇರಿ ಕಿಶೋರ್ ಕುಮಾರ್ ಪುತ್ತೂರು ಅವರ ಗೆಲುವಿಗಾಗಿ ಶ್ರಮಿಸೋಣ ಎಂದರು.
ಜಿಲ್ಲಾಧ್ಯಕ್ಷರಾದ ಸತೀಶ್ ಕುಂಪಲ ಮಾತನಾಡಿ, ಪಕ್ಷ ಸಂಘಟನೆಯ ಹಲವಾರು ಜವಾಬ್ದಾರಿಗಳನ್ನು ಸಮರ್ಥವಾಗಿ ನಿರ್ವಹಿಸಿರುವ ಸಮರ್ಥವಾದ ಅಭ್ಯರ್ಥಿಯನ್ನೇ ಬಿಜೆಪಿ ಇಂದು ವಿಧಾನ ಪರಿಷತ್ತಿನ ಉಪಚುನಾವಣೆಯ ಅಭ್ಯರ್ಥಿಯಾಗಿ ಕಣಕ್ಕೆ ಇಳಿಸಿದೆ. ನಾವೆಲ್ಲರೂ ಸೇರಿ ಕಿಶೋರ್ ಅವರನ್ನು ಅತ್ಯಧಿಕ ಮತಗಳಿಂದ ಗೆಲ್ಲಿಸೋಣ ಎಂದರು.
ಹಾಗೂ ಅಭ್ಯರ್ಥಿ ಕಿಶೋರ್ ಕುಮಾರ್ ಪುತ್ತೂರು ಮಾತನಾಡಿ, ಬಾಲ್ಯದಿಂದಲೇ ಸ್ವಯಂ ಸೇವಕ ಸಂಘ, ಎಬಿವಿಪಿ, ಭರಂಗದಳ, ಯುವ ಮೋರ್ಚಾದ ದ ಮೂಲಕ ಸಂಘಟನೆಯಲ್ಲಿ ತೊಡಗಿಸಿಕೊಂಡಿದ್ದ ನನಗೆ ಪಕ್ಷ ಇಂದು ಬಹುದೊಡ್ಡ ಜವಾಬ್ದಾರಿಯನ್ನು ನೀಡಿದೆ, ನಿಮ್ಮೆಲ್ಲರ ಸಹಕಾರದಿಂದ ಪಕ್ಷ ನನಗೆ ನೀಡಿದ ಜವಾಬ್ದಾರಿಯನ್ನು ಸಮರ್ಥವಾಗಿ ನಿರ್ವಹಿಸುತ್ತೇನೆ ಎಂಬ ಆತ್ಮ ವಿಶ್ವಾಸವಿದೆ ಎಂದರು.
ಸಭೆಯಲ್ಲಿ ಚುನಾವಣಾ ಜಿಲ್ಲಾ ಸಂಚಾಲಕ ಕ್ಯಾಪ್ಟನ್ ಗಣೇಶ್ ಕಾರ್ಣಿಕ್, ಜಿಲ್ಲಾ ಪ್ರಧಾನ ಕಾರ್ಯದರ್ಶಿಗಳಾದ ಯತೀಶ್ ಆರ್ವಾರ್, ಪ್ರೇಮಾನಂದ ಶೆಟ್ಟಿ, ಮಂಡಲ ಅಧ್ಯಕ್ಷ ಜಗದೀಶ್ ಆಳ್ವ,, ಬಂಟ್ವಾಳ ಚುನಾವಣಾ ಪ್ರಚಾರ ಸಂಚಾಲಕ ದೇವದಾಸ ಶೆಟ್ಟಿ, ಮಾಜಿ ಜಿಲ್ಲಾ ಪಂಚಾಯತ್ ಸದಸ್ಯೆ ಧನಲಕ್ಷ್ಮೀ ಗಟ್ಟಿ, ಪಕ್ಷದ ಮುಖಂಡರು ಹಾಗೂ ಕಾರ್ಯಕರ್ತರು ಉಪಸ್ಥಿತರಿದ್ದರು.