ಭೋಪಾಲ: ಪಾಪಿ ತಂದೆಯೊಬ್ಬ ತನ್ನ ಮಗಳ ಮೇಲೆಯೇ ನಿರಂತರವಾಗಿ ಅತ್ಯಾಚಾರ ಎಸಗಿರುವ ನೀಚ ಘಟನೆ ಮಧ್ಯಪ್ರದೇಶದ ಛತ್ತರ್ಪುರದಲ್ಲಿ ನಡೆದಿದೆ.
ಆರೋಪಿಯ ಪತ್ನಿ ಮತ್ತು 21 ವರ್ಷದ ಮಗಳು ಇಂದು ಈ ಸಂಬಂಧ ಲವ್ಕುಶ್ ನಗರ ಪೊಲೀಸ್ ಠಾಣೆಗೆ ದೂರು ನೀಡಿದ್ದಾರೆ. 40 ವರ್ಷ ಪ್ರಾಯದ ಆರೋಪಿ ಪರಾರಿಯಾಗಿದ್ದು, ಆತನ ಬಂಧನಕ್ಕೆ ಪೊಲೀಸರು ಹುಡುಕಾಟ ಆರಂಭಿಸಿದ್ದಾರೆ.
ಆರೋಪಿಯ ವಿರುದ್ಧ ಭಾರತೀಯ ನ್ಯಾಯ ಸಂಹಿತಾ (ಬಿಎನ್ಎಸ್) ಅಡಿಯಲ್ಲಿ ಅತ್ಯಾಚಾರ, ಆರೋಪಿ ತನ್ನ ಮಗಳನ್ನು 18 ವರ್ಷಕ್ಕಿಂತ ಕಡಿಮೆ ವಯಸ್ಸಿನಿಂದಲೂ ಅತ್ಯಾಚಾರವೆಸಗುತ್ತಿದ್ದರಿಂದ ಲೈಂಗಿಕ ಅಪರಾಧಗಳಿಂದ ಮಕ್ಕಳ ರಕ್ಷಣೆ ಪೋಕ್ಸೊ ಕಾಯ್ದೆಯಡಿಯೂ ಪೊಲೀಸರು ಪ್ರಕರಣ ದಾಖಲಿಸಿದ್ದಾರೆ.
ಆರೋಪಿಯನ್ನು ಬಂಧಿಸಲು ವಿಶೇಷ ತಂಡಗಳನ್ನು ರಚಿಸಲಾಗಿದೆ ಎಂದು ಛತ್ತರ್ಪುರ ಎಸ್ಪಿ ತಿಳಿಸಿದ್ದಾರೆ.