ಬೆಳ್ತಂಗಡಿ: ಹೃದಯಾಘಾತದಿಂದ ಯುವಕ ಮೃತಪಟ್ಟ ಘಟನೆ ಉಜಿರೆಯಲ್ಲಿ ನಡೆದಿದೆ.
ಉಜಿರೆ ಗ್ರಾಮದ ಅತ್ತಾಜೆ ನಿವಾಸಿ, ಜರ್ಮನಿಯಲ್ಲಿ ಸಾಫ್ಟ್ ವೇರ್ ಇಂಜಿನಿಯರ್ ಆಗಿರುವ ಆದಿತ್ಯ ಭಟ್ (28) ಮೃತಪಟ್ಟ ಯುವಕ
ರಮೇಶ್ ಭಟ್ ಎಂಬವರ ಪುತ್ರ ಆದಿತ್ಯ ಭಟ್ ಶುಕ್ರವಾರ ಮನೆಯಲ್ಲಿ ನಡೆದ ಆಯುಧ ಪೂಜೆಯ ಸಂಭ್ರಮದಲ್ಲಿ ಪಾಲ್ಗೊಂಡಿದ್ದರು. ಈ ಸಂದರ್ಭ ಅವರಿಗೆ ಎದೆನೋವು ಕಾಣಿಸಿಕೊಂಡು ಅಸ್ವಸ್ಥರಾದ ತಕ್ಷಣ ಮನೆಯವರು ಆಸ್ಪತ್ರೆಗೆ ಚಿಕಿತ್ಸೆಗಾಗಿ ಕರೆದುಕೊಂಡು ಹೋಗಿದ್ದಾರೆ. ಅದರೆ ಅಷ್ಟೊತ್ತಿಗಾಗಲೇ ಅವರು ಮೃತಪಟ್ಟಿದ್ದಾರೆ ಎನ್ನಲಾಗಿದೆ.
ಮೃತರು ತಂದೆ, ತಾಯಿ, ಸಹೋದರಿ ಹಾಗೂ ಅಪಾರ ಬಂಧು ಬಳಗವನ್ನು ಅಗಲಿದ್ದಾರೆ.
























