ಮಾಜಿ ಸಚಿವ ನಾಗೇಂದ್ರ ಇಂದು ಜೈಲಿನಿಂದ ಬಿಡುಗಡೆ ಸಾಧ್ಯತೆ

ವಾಲ್ಮೀಕಿ ನಿಗಮದ ಬಹುಕೋಟಿ ಹಗರಣದಲ್ಲಿ ಸೆರೆಯಾಗಿರುವ ನಾಗೇಂದ್ರ

ಬೆಂಗಳೂರು: ಮಹರ್ಷಿ ವಾಲ್ಮೀಕಿ ಪರಿಶಿಷ್ಟ ಪಂಗಡಗಳ ಅಭಿವೃದ್ಧಿ ನಿಗಮದ ಬಹುಕೋಟಿ ಹಗರಣಕ್ಕೆ ಸಂಬಂಧಿಸಿ ಬಂಧನಲ್ಲಿರುವ ಮಾಜಿ ಸಚಿವ ನಾಗೇಂದ್ರಗೆ ನಿನ್ನೆ ಜಾಮೀನು ಸಿಕ್ಕಿದ್ದು, ಇಂದು ಜೈಲಿನಿಂದ ಬಿಡುಗಡೆಯಾಗುವ ಸಾಧ್ಯತೆ ಇದೆ.

ಪರಪ್ಪನ ಅಗ್ರಹಾರ ಜೈಲಲ್ಲಿ ನಾಗೇಂದ್ರ ನ್ಯಾಯಾಂಗ ಬಂಧನದಲ್ಲಿದ್ದಾರೆ. ಸೋಮವಾರ ಸಂಜೆ ಕೋರ್ಟ್‌ ಆದೇಶ ಪ್ರಕಟವಾದ ಹಿನ್ನೆಲೆಯಲ್ಲಿ ಇಂದು ನಾಗೇಂದ್ರ ಜೈಲಿನಿಂದ ಬಿಡುಗಡೆಯಾಗುವ ಸಾಧ್ಯತೆಯಿದೆ.
ಜುಲೈ 12ರಂದು ಜಾರಿ ನಿರ್ದೇಶನಾಲಯ ಸತತ 7 ಗಂಟೆ ವಿಚಾರಣೆ ನಡೆಸಿದ ಬಳಿಕ ನಾಗೇಂದ್ರ ಅವರನ್ನು ಬಂಧಿಸಿತ್ತು. 2 ಲಕ್ಷ ರೂ. ಬಾಂಡ್, ಎರಡು ಶ್ಯೂರಿಟಿ, ತನಿಖಾ ಸಂಸ್ಥೆಗಳು ಕರೆದಾಗ ವಿಚಾರಣೆಗೆ ಹಾಜರಾಗಬೇಕೆಂದು ಷರತ್ತು ವಿಧಿಸಿ ನಿನ್ನೆ ಅವರಿಗೆ ಜಾಮೀನು ನೀಡಲಾಗಿದೆ.



































 
 

ವಾಲ್ಮೀಕಿ ನಿಗಮದ ಹಣವನ್ನು 2024ರ ಲೋಕಸಭೆ ಚುನಾವಣೆಯಲ್ಲಿ ಸ್ಪರ್ಧಿಸಿದ್ದ ಬಳ್ಳಾರಿ ಅಭ್ಯರ್ಥಿಯ ಖರ್ಚು ಮತ್ತು ಹಾಗೂ ಬಿ.ನಾಗೇಂದ್ರ ಅವರ ವೈಯಕ್ತಿಕ ವೆಚ್ಚಕ್ಕೆ ಬಳಸಲಾಗಿದೆ ಎಂದು ಜಾರಿ ನಿರ್ದೇಶನಾಲಯ ಚಾರ್ಜ್‌ಶೀಟ್‌ನಲ್ಲಿ ಉಲ್ಲೇಖಿಸಿದೆ. ನಾಗೇಂದ್ರ ಅವರ ಸೂಚನೆ ಮೇರೆಗೆ ವಿಜಯ್ ಕುಮಾರ್ ಗೌಡ ನಗದನ್ನು ನಿರ್ವಹಿಸುತ್ತಿದ್ದರು. ಅವರ ಮೊಬೈಲ್ ಫೋನ್‌ನಿಂದ ಚುನಾವಣಾ ವೆಚ್ಚದ ವಿವರಗಳನ್ನು ಪಡೆಯಲಾಗಿದೆ. ಹಗರಣ ಬೆಳಕಿಗೆ ಬಂದ ನಂತರ ರಾಜೀನಾಮೆ ನೀಡಿದ ಬಿ.ನಾಗೇಂದ್ರ ಅವರು ತಮ್ಮ ಮೊಬೈಲ್ ಫೋನ್‌ಗಳನ್ನು ನಾಶಪಡಿಸಿದ್ದಾರೆ. ಅಷ್ಟೇ ಅಲ್ಲದೇ ಉಳಿದವರಿಗೆ ಈ ಪ್ರಕರಣದಲ್ಲಿ ಮೌನವಾಗಿರುವಂತೆ ಸೂಚನೆ ನೀಡಿದ್ದಾರೆ. ಹೆಚ್ಚಿನ ತನಿಖೆ ಪ್ರಗತಿಯಲ್ಲಿದೆ ಎಂದು ಇ.ಡಿ ಹೇಳಿತ್ತು.

Leave a Comment

Your email address will not be published. Required fields are marked *

This site uses Akismet to reduce spam. Learn how your comment data is processed.

error: Content is protected !!
Scroll to Top