ಶಾಸಕ ಮುನಿರತ್ನ ಜೈಲಿನಿಂದ ಬಿಡುಗಡೆ

ಬೆಂಗಳೂರು: ಅತ್ಯಾಚಾರ ಆರೋಪ ಪ್ರಕರಣದಲ್ಲಿ ನ್ಯಾಯಾಂಗ ಬಂಧನದಲ್ಲಿದ್ದ ಬಿಜೆಪಿ ಶಾಸಕ ಮುನಿರತ್ನ ಪರಪ್ಪನ ಅಗ್ರಹಾರ ಜೈಲಿನಿಂದ ಇಂದು ಬಿಡುಗಡೆಯಾಗಿದ್ದಾರೆ. 20ಕ್ಕೂ ಹೆಚ್ಚು ದಿನಗಳಿಂದ ಜೈಲಿನಲ್ಲಿದ್ದ ಮುನಿರತ್ನ ಬುಧವಾರ ಬಿಡುಗಡೆಯಾಗಿ, ಜೈಲಿನಿಂದ ನೇರವಾಗಿ ತಮ್ಮ ಮನೆ ಕಡೆ ತೆರಳಿದರು.
ಜೈಲಿನಿಂದ ಮುನಿರತ್ನ ಬಿಡುಗಡೆಯಾದ ಹಿನ್ನೆಲೆಯಲ್ಲಿ ಬೆಂಬಲಿಗರು ಸಿಹಿ ಹಂಚಿ, ಪಟಾಕಿ ಸಿಡಿಸಿ ಸಂಭ್ರಮಿಸಿದರು. ವೈಯಾಲಿಕಾವಲ್‌ನಲ್ಲಿರುವ ಮುನಿರತ್ನ ನಿವಾಸದೆದುರು ಬೆಂಬಲಿಗರು ಸಂಭ್ರಮಿಸಿದರು. ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ಮುನಿರತ್ನಗೆ ಮಂಗಳವಾರ ಜಾಮೀನು ನೀಡಿ 1 ಲಕ್ಷ ರೂ. ಪರ್ಸನಲ್ ಬಾಂಡ್ ಮತ್ತು ಇಬ್ಬರ ಶೂರಿಟಿ ನೀಡುವಂತೆ ಷರತ್ತು ವಿಧಿಸಿದೆ.

Leave a Comment

Your email address will not be published. Required fields are marked *

This site uses Akismet to reduce spam. Learn how your comment data is processed.

error: Content is protected !!
Scroll to Top