ಪುತ್ತೂರಿನ ಸೋಮವಾರದ ಸಂತೆ ರದ್ದು | ನಗರಸಭೆ ಪೌರಾಯುಕ್ತರಿಂದ ಆದೇಶ

ಪುತ್ತೂರು: ಅ.21 ರಂದು ನಡೆಯಲಿರುವ ವಿಧಾನಪರಿಷತ್ ಚುನಾವಣೆ ಹಿನ್ನಲೆಯಲ್ಲಿ ಪುತ್ತೂರಿನಲ್ಲಿ ನಡೆಯುವ ಸಂತೆಯನ್ನು ರದ್ದುಗೊಳಿಸಿ ನಗರಸಭೆ ಪೌರಾಯುಕ್ತರು ಆದೇಶ ಹೊರಡಿಸಿದ್ದಾರೆ.

ದಕ್ಷಿಣ ಕನ್ನಡ ಸ್ಥಳೀಯ ಪ್ರಾಧಿಕಾರ ಕ್ಷೇತ್ರದಿಂದ ವಿಧಾನ ಪರಿಷತ್‌ಗೆ ನೂತನ ಸದಸ್ಯರೋರ್ವರ  ಆಯ್ಕೆಗಾಗಿ ಅ. 21ರಂದು ಉಪಚುನಾವಣೆ ನಡೆಯಲಿದ್ದು, ಈ ಹಿನ್ನೆಲೆಯಲ್ಲಿ ಸಂತೆ ರದ್ದುಗೊಳಿಸಲಾಗಿದೆ.

ನಗರಸಭಾ ಕಚೇರಿಯೂ ಮತಗಟ್ಟೆಯಾಗಿದ್ದು ಮತಗಟ್ಟೆಯ 200 ಮೀಟರ್ ವ್ಯಾಪ್ತಿಯಲ್ಲಿ ನಿಷೇಧಾಜ್ಞೆ ಜಾರಿಯಲ್ಲಿದೆ. ಹಾಗಾಗಿ ಅ. 21ರಂದು ಕಿಲ್ಲೆ ಮೈದಾನದಲ್ಲಿ ನಡೆಯಬೇಕಿದ್ದ ಸೋಮವಾರದ ಸಂತೆಯನ್ನು ರದ್ದು ಪಡಿಸಲಾಗಿದೆ ಎಂದು ನಗರಸಭೆ ಪೌರಾಯುಕ್ತ ಮಧು ಎಸ್.ಮನೋಹರ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.































 
 

Leave a Comment

Your email address will not be published. Required fields are marked *

This site uses Akismet to reduce spam. Learn how your comment data is processed.

error: Content is protected !!
Scroll to Top