ಭೀಕರ ಅಪಘಾತ : 12 ಮಂದಿ ಸಾವು

ಜೈಪುರ : ರಾಜಸ್ಥಾನದ ಧೋಲ್ಪುರದಲ್ಲಿ ಸಂಭವಿಸಿದ ಭೀಕರ ಅಪಘಾತದಲ್ಲಿ 12 ಮಂದಿ ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಕರೌಲಿ-ಧೋಲ್ಪುರ್ ಹೆದ್ದಾರಿಯಲ್ಲಿ ಸುನಿಪುರ್ ಎಂಬ ಗ್ರಾಮದ ಬಳಿ ನಿನ್ನೆ ತಡರಾತ್ರಿ ಆಟೋರಿಕ್ಷಾ ಮತ್ತು ಬಸ್ ನಡುವೆ ಈ ಭೀಕರ ಅಪಘಾತ ಸಂಭವಿಸಿದೆ.
ಮೃತರಲ್ಲಿ ಐವರು ಮಕ್ಕಳು, ಮೂವರು ಬಾಲಕಿಯರು, ಇಬ್ಬರು ಮಹಿಳೆಯರು ಹಾಗೂ ಇಬ್ಬರು ಪುರುಷರು ಸೇರಿದ್ದಾರೆ. ಅಪಘಾತದ ಬಗ್ಗೆ ಮಾಹಿತಿ ಪಡೆದ ಸ್ಥಳೀಯ ಪೊಲೀಸರು ಸ್ಥಳಕ್ಕೆ ಧಾವಿಸಿ, ಮೃತದೇಹವನ್ನು ಹೊರತೆಗೆದು ಮರಣೋತ್ತರ ಪರೀಕ್ಷೆಗೆ ಕಳುಹಿಸಿದ್ದಾರೆ.
ಬರೌಲಿ ಗ್ರಾಮದಲ್ಲಿ ಕಾರ್ಯಕ್ರಮವೊಂದರಲ್ಲಿ ಭಾಗವಹಿಸಿ ಆಟೋರಿಕ್ಷಾದಲ್ಲಿ ಹಿಂತಿರುಗುತ್ತಿದ್ದಾಗ ಅಪಘಾತ ಸಂಭವಿಸಿದೆ. ಆಟೋರಿಕ್ಷಾ ಛಿದ್ರಗೊಂಡಿದ್ದು, ಅಪಘಾತದ ತೀವ್ರತೆಗೆ ಸಾಕ್ಷಿ ನುಡಿಯುತ್ತಿದೆ. ಆಟೋದಲ್ಲಿ ಮಿತಿಗಿಂತ ಹೆಚ್ಚು ಪ್ರಯಾಣಿಕರು ತುಂಬಿದ್ದರು. ಪ್ರಾಥಮಿಕ ತನಿಖೆಯಲ್ಲಿ ಅತಿವೇಗ ಮತ್ತು ಅಜಾಗರೂಕತೆಯೇ ಅಪಘಾತಕ್ಕೆ ಕಾರಣ ಎಂದು ತಿಳೀದುಬಂದಿದೆ. ಬಸ್ ಚಾಲಕನ ವಿರುದ್ಧ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದು, ಆತನನ್ನು ವಶಕ್ಕೆ ಪಡೆದು ವಿಚಾರಣೆ ನಡೆಸುತ್ತಿದ್ದಾರೆ.

Leave a Comment

Your email address will not be published. Required fields are marked *

This site uses Akismet to reduce spam. Learn how your comment data is processed.

error: Content is protected !!
Scroll to Top