ಕಾರ್ಕಳ : ಪ್ರಿಯಕರನ ಜತೆ ಸೇರಿ ಪತಿಯ ಹತ್ಯೆ ಮಾಡಿದ ಪತ್ನಿ

ಇನ್‌ಸ್ಟಾಗ್ರಾಂ ಗೆಳೆಯನ ಮೋಹದಲ್ಲಿ ದಾರಿ ತಪ್ಪಿದ ಗೃಹಿಣಿ

ಕಾರ್ಕಳ: ಪ್ರಿಯಕರನ ಜೊತೆ ಸೇರಿಕೊಂಡು ಪತಿಯನ್ನು ಪತ್ನಿಯೇ ಹತ್ಯೆ ಮಾಡಿರುವ ಘಟನೆ ಕಾರ್ಕಳ ತಾಲೂಕಿನ ಅಜೆಕಾರಿ ಎಂಬಲ್ಲಿ ನಡೆದಿದೆ.
ಬಾಲಕೃಷ್ಣ ಪೂಜಾರಿ (44) ಕೊಲೆಯಾದ ವ್ಯಕ್ತಿ. ಆತನ ಪತ್ನಿ ಪ್ರತಿಮಾ (36) ಹಾಗೂ ಆಕೆಯ ಪ್ರಿಯಕರ ದಿಲೀಪ್‌ ಹೆಗ್ಡೆಯನ್ನು (28) ಪೊಲೀಸರು ವಶಕ್ಕೆ ಪಡೆದು ವಿಚಾರಣೆಗೆ ಒಳಪಡಿಸಿದ್ದಾರೆ.

ಬಾಲಕೃಷ್ಣ ಪೂಜಾರಿ ಕಳೆದ 25 ದಿನಗಳಿಂದ ಜ್ವರ, ವಾಂತಿ ಆಗಿ ಅನಾರೋಗ್ಯದಿಂದ ಬಳಲುತ್ತಿದ್ದರು. ಕಾಮಾಲೆ ರೋಗ ಎಂದು ವಿವಿಧ ಆಸ್ಪತ್ರೆಗಳಲ್ಲಿ ಚಿಕಿತ್ಸೆ ಕೊಡಿಸಲಾಗಿತ್ತು. ಕಾರ್ಕಳ ರೋಟರಿ, ಮಣಿಪಾಲ ಕೆಎಂಸಿ, ಮಂಗಳೂರಿನ ವೆನ್ಲಾಕ್, ಬೆಂಗಳೂರಿನ ನಿಮಾನ್ಸ್, ವಿಕ್ಟೋರಿಯಾ ಹಾಗೂ ಮಂಗಳೂರಿನ ಆಸ್ಪತ್ರೆಯಲ್ಲೂ ಚಿಕಿತ್ಸೆ ನೀಡಲಾಗಿತ್ತು. ಆದರೆ, ಅ.20ರಂದು ಬಾಲಕೃಷ್ಣ ಮನೆಯಲ್ಲಿ ಸಾವನ್ನಪ್ಪಿದ್ದರು. ಇದು ಅನಾರೋಗ್ಯದಿಂದ ಸಂಭವಿಸಿದ ಸಾವು ಎಂದು ನಂಬಿಸುವಲ್ಲಿ ಪ್ರತಿಮಾ ಯಶಸ್ವಿಯಾಗಿದ್ದಳು.





































 
 

ಸಾವಿನ ಬಗ್ಗೆ ಸಂಶಯ ವ್ಯಕ್ತಪಡಿಸಿ ಪ್ರತಿಮಾಳ ಸಹೋದರ ಪೊಲೀಸ್‌ ಠಾಣೆಗೆ ದೂರು ನೀಡಿದ್ದರು. ಈ ಸಂಬಂಧ ಅಜೆಕಾರು ಠಾಣೆಯಲ್ಲಿ ಪ್ರಕರಣ ದಾಖಲಾಯಿತು. ತನಿಖೆ ವೇಳೆ ಪ್ರತಿಮಾ ಮತ್ತು ಆಕೆಯ ಪ್ರಿಯಕರನ ದಿಲೀಪ್‌ ಮೇಲೆ ಸಂಶಯ ವ್ಯಕ್ತವಾಗಿ ವಿಚಾರಣೆಗೆ ಒಳಪಡಿಸಲಾಯಿತು.
ಬಾಲಕೃಷ್ಣ ಸಾವಿನ ಬಳಿಕ ಪತ್ನಿ ಪ್ರತಿಮಾಳ ಚಲನವಲನ ಬಗ್ಗೆ ಆಕೆಯ ಸಹೋದರನೇ ಅನುಮಾನಗೊಂಡಿದ್ದ. ಸಾವಿನ ಬಗ್ಗೆ ಆಕೆಯನ್ನು ಪ್ರಶ್ನಿಸಿದ್ದಾನೆ. ಪ್ರತಿಮಾ ತನ್ನ ಸಹೋದರನ ಬಳಿ ಎಲ್ಲವನ್ನೂ ಹೇಳಿಕೊಂಡಿದ್ದಾಳೆ. ಊಟದಲ್ಲಿ ವಿಷ ಬೆರೆಸಿ ಬಳಿಕ ಬೆಡ್‌ಶೀಟ್‌ನಿಂದ ಉಸಿರುಗಟ್ಟಿಸಿ ಕೊಲೆ ಮಾಡಿರುವುದಾಗಿ ಪ್ರತಿಮಾ ಒಪ್ಪಿಕೊಂಡಿದ್ದಾಳೆ ಎನ್ನಲಾಗಿದೆ. ಪ್ರಿಯಕರನ ಜೊತೆ ಸೇರಿಕೊಂಡು ಪತಿ ಕೊಲೆ ಮಾಡಿರುವುದಾಗಿ ಆಕೆ ಒಪ್ಪಿಕೊಂಡಿದ್ದಾಳೆಂದು ತಿಳಿದುಬಂದಿದೆ.
ಬಾಲಕೃಷ್ಣ ಪೂಜಾರಿ ಮುಂಬಯಿಯಲ್ಲಿ ಉದ್ಯೋಗದಲ್ಲಿದ್ದವರು ಕೊರೊನ ಸಂದರ್ಭದಲ್ಲಿ ಕುಟುಂಬ ಸಮೇತ ಊರಿಗೆ ಬಂದು ನೆಲೆಯಾಗಿದ್ದರು. ನಿಟ್ಟೆಯಲ್ಲಿ ಕ್ಯಾಂಟೀನ್‌ ನಡೆಸುತ್ತಿದ್ದ ಅವರು ಕಳೆದ ವರ್ಷ ಹೊಸಮನೆಯನ್ನೂ ಕಟ್ಟಿಸಿದ್ದರು. ಈ ದಂಪತಿಗೆ ಇಬ್ಬರು ಮಕ್ಕಳಿದ್ದಾರೆ. ಪ್ರತಿಮಾಳಿಗೆ ವಿಪರೀತ ರೀಲ್ಸ್‌ ಹುಚ್ಚು ಇದ್ದು, ಸೋಷಿಯಲ್‌ ಮೀಡಿಯಾದ ಮೂಲಕ ದಿಲೀಪ್‌ ಹೆಗ್ಡೆಯ ಪರಿಚಯ ಆಗಿತ್ತು ಎನ್ನಲಾಗಿದೆ.
ಇವರ ಟನೈತಿಕ ಸಂಬಂದ ತಿಳಿದಾಗ ಮನೆಯಲ್ಲಿ ಗಲಾಟೆಯೂ ಆಗಿತ್ತು. ಬಳಿಕ ಪ್ರಕರಣ ಠಾನೆ ಮೆಟ್ಟಲೇರಿ ಅಲ್ಲಿ ರಾಜಿ ಪಂಚಾತಿಕೆ ಆಗಿ ಪೊಲೀಸರು ಮುಚ್ಚಳಿಕೆ ಬರೆಸಿಕೊಂಡು ಬಿಟ್ಟಿದ್ದರು. ಪ್ರತಿಮಾಳ ಅಣ್ಣ ಅವಳಿಗೆ ಸಾಕಷ್ಟು ಬಾರಿ ಬುದ್ಧೀಮಾತು ಹೆಳಿ ಗುಣನಡತೆ ತಿದ್ದಿಕೊಳ್ಳಲು ತಾಕೀತು ಕೂಡ ಮಾಡಿದ್ದರು ಎನ್ನಲಾಗಿದೆ.

Leave a Comment

Your email address will not be published. Required fields are marked *

This site uses Akismet to reduce spam. Learn how your comment data is processed.

error: Content is protected !!
Scroll to Top