ಮಾಸ್ಟರ್ಸ್ ಸ್ವಿಮ್ಮಿಂಗ್ ಚಾಂಪಿಯನ್ ಶಿಪ್ : ಧನುಷ್ ರೈ ರಾಷ್ಟ್ರಮಟ್ಟಕ್ಕೆ ಆಯ್ಕೆ          

ಪುತ್ತೂರು: 25ನೇ ರಾಜ್ಯಮಟ್ಟದ ಮಾಸ್ಟರ್ಸ್ ಸ್ವಿಮ್ಮಿಂಗ್ ಚಾಂಪಿಯನ್ ಶಿಪ್ -2024 ವತಿಯಿಂದ ಬೆಂಗಳೂರಿನಲ್ಲಿ ನಡೆದ ಈಜು ಸ್ಪರ್ಧೆಯಲ್ಲಿ ಧನುಷ್ ಎನ್. ರೈ ಒಂದು ಬೆಳ್ಳಿ ಮತ್ತು ಎರಡು ಕಂಚಿನ ಪದಕಗಳನ್ನು ಗೆದ್ದು ರಾಷ್ಟ್ರಮಟ್ಟದ ಸ್ಪರ್ಧೆಗೆ ಆಯ್ಕೆಯಾಗಿದ್ದಾರೆ.

ದಕ್ಷಿಣ ಕನ್ನಡ ಜಿಲ್ಲೆಯಿಂದ ಧನುಷ್ ಭಾಗವಹಿಸಿ 50 ಮೀ. ಬ್ರೆಸ್ಟ್ ಸ್ಟ್ರೋಕ್ , 100 ಮೀ. ಬ್ರೆಸ್ಟ್ ಸ್ಟ್ರೋಕ್  ಹಾಗೂ 4× 50 ಮೀ ಫ್ರೀ ಸ್ಟೈಲ್ ರಿಲೇ ವಿಭಾಗದಲ್ಲಿ ಭಾಗವಹಿಸಿ ಒಂದು ಬೆಳ್ಳಿ ಹಾಗೂ ಎರಡು ಕಂಚಿನ ಪದಕಗಳನ್ನು ಪಡೆದಿದ್ದಾರೆ.

ಧನುಷ್ ಎನ್. ಜೆ. ರೈ  ಮತ್ತು ಸೀನಿಯರ್ ಚೇಂಬರ್ ಇಂಟರ್ ನ್ಯಾಷನಲ್ ಪುತ್ತೂರು ಲೀಜನ್ ಸ್ಥಾಪಕಾಧ್ಯಕ್ಷೆ ಮಲ್ಲಿಕಾ ಜೆ ಆರ್ ರೈ ದಂಪತಿ ಪುತ್ರ.







































 
 

Leave a Comment

Your email address will not be published. Required fields are marked *

This site uses Akismet to reduce spam. Learn how your comment data is processed.

error: Content is protected !!
Scroll to Top