ರಾತ್ರಿ 8ರಿಂದ 10ರ ನಡುವೆ ಹಸಿರು ಪಟಾಕಿ ಸುಡಬೇಕು
ಬೆಂಗಳೂರು: ದೀಪಾವಳಿ ಹಬ್ಬದ ಸಂದರ್ಭದಲ್ಲಿ 2 ತಾಸು ಮಾತ್ರ ಪಟಾಕಿ ಸುಡಲು ಅವಕಾಶ ಸಿಗುತ್ತದೆ. ಸುಪ್ರೀಂ ಕೋರ್ಟ್ ಆದೇಶದ ಅನುಸಾರ ರಾತ್ರಿ 8ರಿಂದ 10 ಗಂಟೆ ತನಕ ಹಸಿರು ಪಟಾಕಿ ಹೊಡೆಯಬೇಕು ಎಂದು ಸರಕಾರ ಆದೇಶ ನೀಡಿದೆ.
ರಾತ್ರಿ 8 ಗಂಟೆಯಿಂದ 10 ಗಂಟೆ ತನಕ ಪಟಾಕಿ ಹೊಡೆಯಬೇಕು. ಸುಪ್ರೀಂ ಕೋರ್ಟ್ ಆದೇಶದಂತೆ ದೀಪಾವಳಿ ಸಂದರ್ಭದಲ್ಲಿ ಹಸಿರು ಪಟಾಕಿಗೆ ಮಾತ್ರ ಅವಕಾಶವಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ.
ಪರಿಸರಕ್ಕೆ ಹಾನಿಯಾಗುವ ಪಟಾಕಿಗಳಿಗೆ ಯಾವುದೇ ಕಾರಣಕ್ಕೂ ಅವಕಾಶ ನೀಡಬಾರದು. ಪಟಾಕಿ ದಾಸ್ತಾನು, ಮಾರಾಟ ಪ್ರಕ್ರಿಯೆಯಲ್ಲಿ ಸುರಕ್ಷತೆ ವಿಷಯದಲ್ಲಿ ಯಾವುದೇ ಲೋಪವಾಗದಂತೆ ನೋಡಿಕೊಳ್ಳಬೇಕು. ಜಿಲ್ಲಾಧಿಕಾರಿಗಳು ಹಾಗೂ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳು ಈ ಕುರಿತು ಕಟ್ಟುನಿಟ್ಟಿನ ಕ್ರಮ ಕೈಗೊಳ್ಳಬೇಕೆಂದು ಸೂಚಿಸಿದ್ದೇನೆ ಎಂದು ತಿಳಿಸಿದ್ದಾರೆ.