ಮುಂಬಯಿ: ಬಾಂದ್ರ ರೈಲು ನಿಲ್ದಾಣದಲ್ಲಿ ಕಾಲ್ತುಳಿತದಿಂದ 9 ಮಂದಿಗೆ ಗಾಯ

ದೀಪಾವಳಿ ಹಬ್ಬದ ಹಿನ್ನೆಲೆಯಲ್ಲಿ ಪ್ರಯಾಣಿಕರಿಂದ ಗಿಜಿಗುಡುತ್ತಿದ್ದ ರೈಲ್ವೆ ಸ್ಟೇಷನ್‌

ಮುಂಬಯಿ: ಉಪನಗರ ಬಾಂದ್ರ ಟರ್ಮಿನಸ್‌ ರೈಲು ನಿಲ್ದಾಣದಲ್ಲಿ ಭೀಕರ ಕಾಲ್ತುಳಿತ ಸಂಭವಿಸಿ ಕನಿಷ್ಠ 9 ಮಂದಿ ಗಾಯಗೊಂಡ ಘಟನೆ ಇಂದು ಬೆಳಗ್ಗೆ ಸಂಭವಿಸಿದೆ.
ಬಾಂದ್ರ ಟರ್ಮಿನಸ್‌ನ ಪ್ಲಾಟ್‌ಫಾರ್ಮ್‌ 1ರಲ್ಲಿ ಕಾಲ್ತುಳಿತ ಸಂಭವಿಸಿದೆ. ದೀಪಾವಳಿ ಹಬ್ಬದ ಹಿನ್ನೆಲೆಯಲ್ಲಿ ರೈಲು ನಿಲ್ದಾಣದಲ್ಲಿ ಊರಿಗೆ ಹೋಗುವ ಪ್ರಯಾಣಿಕರ ದಟ್ಟಣೆಯಿತ್ತು. ಪ್ಲಾಟ್‌ಫಾರ್ಮ್‌ಗಳಲ್ಲಿ ಪ್ರಯಾಣಿಕರು ಗಿಜಿಗುಡುತ್ತಿದ್ದರು. 1ನೇ ನಂಬರ್‌ ಪ್ಲಾಟ್‌ಫಾರ್ಮ್‌ನಲ್ಲಿ ಬಾಂದ್ರ-ಗೋರಖ್‌ಪುರ ಎಕ್ಸ್‌ಪ್ರೆಸ್‌ ರೈಲು ಹೊರಡುವ ತುಸು ಮುನ್ನ ಕಾಲ್ತುಳಿತ ಸಂಭವಿಸಿದೆ. 9 ಮಂದಿ ಗಾಯಗೊಂಡಿದ್ದು, ಈ ಪೈಕಿ ಇಬ್ಬರ ಸ್ಥಿತಿ ಚಿಂತಾಜನಕವಿದೆ ಎಂದು ಪ್ರತ್ಯಕ್ಷದರ್ಶಿಯೊಬ್ಬರು ತಿಳಿಸಿದ್ದಾರೆ.

Leave a Comment

Your email address will not be published. Required fields are marked *

This site uses Akismet to reduce spam. Learn how your comment data is processed.

error: Content is protected !!
Scroll to Top