ವಿವೇಕಾನಂದ ಕಾನೂನು ಮಹಾವಿದ್ಯಾಲಯದಲ್ಲಿ ವಿಶೇಷ ಉಪನ್ಯಾಸ | ‘ನನಗಲ್ಲ ನಿನಗೆ’ ಎನ್ನುವ ಸೇವಾ ಭಾವನೆಯೇ ದೇಶ ಸೇವೆಯ ಮೊದಲ ಹೆಜ್ಜೆ : ಡಾ.ನಂದೀಶ್ ವೈ.ಡಿ.

ಪುತ್ತೂರು: ವಿವೇಕಾನಂದ ಕಾನೂನು ಮಹಾವಿದ್ಯಾಲಯದ ರಾಷ್ಟ್ರೀಯ ಸೇವಾ ಯೋಜನಾ ಘಟಕದ 2023-24ನೇ ಸಾಲಿನ ಎನ್. ಎಸ್. ಎಸ್. ಚಟುವಟಿಕೆಗಳ ಸಮಾರೋಪ ಸಮಾರಂಭ ಹಾಗೂ ವಿಶೇಷ ಉಪನ್ಯಾಸ ಕಾರ್ಯಕ್ರಮ ನಡೆಯಿತು.

ಮುಖ್ಯ ಅತಿಥಿಯಾಗಿ ಉಪ್ಪಿನಂಗಡಿ ಸರಕಾರಿ ಪ್ರಥಮ ದರ್ಜೆ ಕಾಲೇಜಿನ ಸಮಾಜಕಾರ್ಯ ವಿಭಾಗದ ಮುಖ್ಯಸ್ಥ, ಸಹಾಯಕ ಪ್ರಾಧ್ಯಾಪಕ ಡಾ. ನಂದೀಶ್ ವೈ. ಡಿ., ಭಾವನಾತ್ಮಕ ಬುದ್ಧಿವಂತಿಕೆ ಮತ್ತು ದೇಶ ಪ್ರೇಮ ಎಂಬ ವಿಷಯದ ಕುರಿತು ವಿಶೇಷ ಉಪನ್ಯಾಸ ನೀಡಿ ನಮ್ಮ ಮನಸ್ಸು ಯಾವ ರೀತಿ ಯೋಚನೆ ಮಾಡುತ್ತದೆಯೋ ಅದೇ ರೀತಿ ನಮ್ಮ ಎಲ್ಲಾ ವರ್ತನೆಗಳು ಇರುತ್ತದೆ. ಭಾವನಾತ್ಮಕ ಬುದ್ಧಿವಂತಿಕೆಯು ನಿಮ್ಮ ಭಾವನೆಗಳ ಸ್ವಯಂ ಅರಿವು ಮೂಡಿಸುವ ಆಲೋಚನೆಗಳನ್ನು ತರುವಂತಹ ಅಂಶವಾಗಿದ್ದು ನಿಮ್ಮ ಶಕ್ತಿ ಹಾಗೂ ದೌರ್ಬಲ್ಯದ ಅರಿವು ಮೂಡಿಸುತ್ತದೆ. ಸಮಾಜದ ಅವಶ್ಯಕತೆಗೆ ತಕ್ಕಂತೆ ಪ್ರಜ್ಞಾವಂತ ನಾಗರಿಕರಾಗಿ ನಾವು ಸ್ಪಂದಿಸಿದರೆ ಅದುವೇ ದೊಡ್ಡ ದೇಶ ಪ್ರೇಮ ಎಂದರು.

ವಿವೇಕಾನಂದ ಕಾನೂನು ಮಹಾವಿದ್ಯಾಲಯದ ಪ್ರಿನ್ಸಿಪಾಲ್ ಅಕ್ಷತಾ ಎ. ಪಿ. ಅಧ್ಯಕ್ಷತೆ ವಹಿಸಿ ಮಾತನಾಡಿ, ವಿದ್ಯಾರ್ಥಿಗಳು ಶೈಕ್ಷಣಿಕ ಉನ್ನತಿಯೊಂದಿಗೆ ಭಾವನಾತ್ಮಕ ಬುದ್ಧಿವಂತಿಕೆಯನ್ನು ಅಭಿವೃದ್ಧಿಪಡಿಸಿದಾಗ ಜೀವನದಲ್ಲಿ ಎದುರಿಸಬಹುದಾದಂತಹ ಸನ್ನಿವೇಶಗಳನ್ನು ಯಶಸ್ವಿಯಾಗಿ ನಿಭಾಯಿಸಲು ಸಾಧ್ಯವಾಗುತ್ತದೆ. ಆ ನಿಟ್ಟಿನಲ್ಲಿ ಪ್ರತಿಯೊಬ್ಬ ಕಾನೂನು ವಿದ್ಯಾರ್ಥಿಯು ಸಮಾಜದೊಂದಿಗೆ ನಿರಂತರ ಸಂಪರ್ಕವನ್ನು ಇಟ್ಟುಕೊಂಡು, ಈ ಮಹಾವಿದ್ಯಾಲಯದಲ್ಲಿ ಸಿಗುವ  ಎನ್.ಎಸ್.ಎಸ್.ನಂತಹ ವೇದಿಕೆಗಳನ್ನು ಬಳಸಿಕೊಂಡು, ಭವಿಷ್ಯದಲ್ಲಿ ಉನ್ನತ ಹಂತಕ್ಕೆ ಏರುವ ಜೊತೆಗೆ, ಸೇವೆಯ ಮೂಲಕ ದೇಶ ಪ್ರೇಮವನ್ನು ಬೆಳೆಸಿಕೊಂಡು ಒಬ್ಬ ಪ್ರಜ್ಞಾವಂತ ನಾಗರಿಕನಾಗಿ ಬದುಕಿ ಎಂದರು.































 
 

ಕಾನೂನು ಮಹಾವಿದ್ಯಾಲಯದ ಸಹಾಯಕ ಪ್ರಾಧ್ಯಾಪಕ ಹಾಗೂ ರಾಷ್ಟ್ರೀಯ ಸೇವಾ ಯೋಜನಾ ಘಟಕದ ಕಾರ್ಯಕ್ರಮಾಧಿಕಾರಿ ಲಕ್ಷ್ಮೀಕಾಂತ ರೈ ಅನಿಕೂಟೇಲ್ ಪ್ರಾಸ್ತವಿಕವಾಗಿ ಮಾತನಾಡಿದರು. ಸಹಾಯಕ ಪ್ರಾಧ್ಯಾಪಕಿ ಹಾಗೂ ರಾಷ್ಟ್ರೀಯ ಸೇವಾ ಯೋಜನಾ ಘಟಕದ ಕಾರ್ಯಕ್ರಮಾಧಿಕಾರಿ ಶ್ರೀರಕ್ಷಾ ನೇತೃತ್ವದಲ್ಲಿ ಎನ್.ಎಸ್.ಎಸ್ ಸ್ವಯಂಸೇವಕರಿಗೆ ಪ್ರಮಾಣಪತ್ರ ವಿತರಿಸಲಾಯಿತು. ಎನ್.ಎಸ್.ಎಸ್ ಘಟಕದ ವಿದ್ಯಾರ್ಥಿ ನಾಯಕಿ ಕು. ಅಕ್ಷತಾ ವಾರ್ಷಿಕ ವರದಿ ಮಂಡಿಸಿದರು. ಇನ್ನೊರ್ವ ಎನ್.ಎಸ್.ಎಸ್ ಘಟಕದ ವಿದ್ಯಾರ್ಥಿ ನಾಯಕಿ ವರ್ಷ ಸ್ವಾಗತಿಸಿ, ಸ್ವಯಂಸೇವಕಿ ವಿದ್ಯಾಶ್ರೀ ವಂದಿಸಿದರು. ಸ್ವಯಂಸೇವಕಿ ತನು ನಿರೂಪಿಸಿದರು. ಕಾರ್ಯಕ್ರಮದಲ್ಲಿ ಎನ್. ಎಸ್. ಎಸ್ ಸ್ವಯಂಸೇವಕರು, ಬೋಧಕ ಹಾಗೂ ಬೋಧಕೇತರ ಸಿಬ್ಬಂದಿ ಮತ್ತು ವಿದ್ಯಾರ್ಥಿಗಳು ಉಪಸ್ಥಿತರಿದ್ದರು.

Leave a Comment

Your email address will not be published. Required fields are marked *

This site uses Akismet to reduce spam. Learn how your comment data is processed.

error: Content is protected !!
Scroll to Top