ಪುತ್ತೂರು: ಪುತ್ತೂರಿನ ಸಂತ ಫಿಲೋಮಿನಾ ಕಾಲೇಜು (ಸ್ವಾಯತ್ತ) ಇದರ ಅಕಾಡೆಮಿಕ್ ಕೌನ್ಸಿಲ್ ಸದಸ್ಯರಾಗಿ ಭಾರತ ಸರಕಾರದ ನೋಟರಿ ಪಬ್ಲಿಕ್ ನ್ಯಾಯವಾದಿ ಚಿದಾನಂದ ಬೈಲಾಡಿ ಆಯ್ಕೆಯಾಗಿದ್ದಾರೆ.
ಚಿದಾನಂದ ಬೈಲಾಡಿಯವರು ಪುತ್ತೂರಿನಲ್ಲಿ ಕಾರ್ಯಾಚರಿಸುತ್ತಿರುವ ಸಮರ್ಪಣಾ ಚಾರಿಟೇಬಲ್ ಟ್ರಸ್ಟ್ ಮತ್ತು ನ್ಯೂಸ್ ಪುತ್ತೂರು ಇದರ ನಿರ್ದೇಶಕರೂ ಆಗಿದ್ದಾರೆ.
ಬೈಲಾಡಿಯವರು ವಿವಿಧ ಸಾಮಾಜಿಕ ಮತ್ತು ಧಾರ್ಮಿಕ ಸಂಘಟನೆಗಳಲ್ಲಿ ಕ್ರಿಯಾಶೀಲರಾಗಿದ್ದಾರೆ.