ಸೇನಾ ವಾಹನದ ಮೇಲೆ ಭಯೋತ್ಪಾದಕರ ದಾಳಿ : ಓರ್ವ ಉಗ್ರ ಬಲಿ

ಶ್ರೀನಗರ : ಜಮ್ಮು-ಕಾಶ್ಮೀರದ ಅಕ್ನೂರ್‌ ವಲಯದಲ್ಲಿ ಸೇನೆಯ ವಾಹನದ ಮೇಲೆ ಉಗ್ರರು ದಾಳಿ ಮಾಡಿದ್ದು, ಈ ಸಂದರ್ಭದಲ್ಲಿ ನಡೆದ ಗುಂಡಿನ ಕಾಳಗದಲ್ಲಿ ಓರ್ವ ಉಗ್ರನನ್ನು ಸಾಯಿಸಲಾಗಿದೆ.
ಅಕ್ನೂರ್‌ ಸಮೀಪ ಬಟಲ್‌ ಎಂಬಲ್ಲಿ ಮೂವರು ಉಗ್ರರು ಸೇನೆಯ ವಾಹನದ ಮೇಲೆ ಗುಂಡಿನ ದಾಳಿ ಮಾಡಿದ್ದಾರೆ. ಸೇನೆ ಕೂಡಲೇ ಈ ಪ್ರದೇಶವನ್ನು ಸುತ್ತುವರಿದು ಉಗ್ರರ ತಲಾಷೆ ಪ್ರಾರಂಭಿಸಿದೆ. ಈ ಸಂದರ್ಭದಲ್ಲಿ ನಡೆದ ಗುಂಡಿನ ಚಕಮಕಿಯಲ್ಲಿ ಓರ್ವ ಉಗ್ರ ಬಲಿಯಾಗಿದ್ದಾನೆ.
ದೀಪಾವಳಿ ಹಬ್ಬಕ್ಕಾಗಿ ಜಮ್ಮು-ಕಾಶ್ಮೀರದಲ್ಲಿ ಭದ್ರತಾ ಪಡೆಗಳು ಭಾರಿ ಬಂದೋಬಸ್ತು ಮಾಡಿದ್ದು, ಇದರ ನಡುವೆ ಉಗ್ರರು ದಾಳಿ ನಡೆಸಿದ್ದಾರೆ. ಕಳೆದೊಂದು ವಾರದಲ್ಲಿ ಕಾಶ್ಮೀರದಲ್ಲಿ ಇಬ್ಬರು ಯೋಧರ ಸಹಿತ 12 ಮಂದಿ ಉಗ್ರರ ಗುಂಡಿಗೆ ಬಲಿಯಾಗಿದ್ದಾರೆ.

Leave a Comment

Your email address will not be published. Required fields are marked *

This site uses Akismet to reduce spam. Learn how your comment data is processed.

error: Content is protected !!
Scroll to Top