13ನೇ ಶತಮಾನದ ಮಠದ ಆಸ್ತಿಯೂ ವಕ್ಫ್‌ ಪಾಲು!

ಭಕ್ತರ ತೀವ್ರ ಆಕ್ರೋಶ, ಉದ್ವಿಗ್ನ ಪರಿಸ್ಥಿತಿ

ವಿಜಯಪುರ: ಸಿಂದಗಿ ಪಟ್ಟಣದಲ್ಲಿರುವ 13ನೇ ಶತಮಾನದ ಮಠದ ಆಸ್ತಿ ಕೂಡ ಈಗ ವಕ್ಫ್‌ ಬೋರ್ಡ್‌ ಆಸ್ತಿ ಎಂದು ನೋಂದಣಿಯಾಗಿದೆ. ವಿಜಯಪುರ ಜಿಲ್ಲೆಯಲ್ಲಿ ರೈತರ ನೂರಾರು ಎಕರೆ ಕೃಷಿಭೂಮಿ ವಕ್ಫ್‌ ಆಸ್ತಿ ಎಂದು ಪಹಣಿಯಾದ ಬೆನ್ನಿಗೆ ಮಠದ ಆಸ್ತಿಯೂ ವಕ್ಫ್‌ ಪಾಲಾಗಿರುವುದು ಬೆಳಕಿಗೆ ಬಂದಿದೆ. ಸರ್ವೆ ನಂಬರ್‌ 1020ರ ಆಸ್ತಿಯಲ್ಲಿ ಕಬರಸ್ಥಾನ ವಕ್ಫ್ ಬೋರ್ಡ್‌ ಎಂದು ನೋಂದಣಿಯಾಗಿದೆ.

ಸಿದ್ದಲಿಂಗ ಸ್ವಾಮಿಜಿ ಈ ಮಠದ ಪೀಠಾಧಿಪತಿಗಳಾಗಿದ್ದಾಗ ಪಹಣಿಯ ಕಾಲಂ ನಂಬರ್‌ 11 ಖಾಲಿ ಇತ್ತು. 2018 – 2019ರಲ್ಲಿ ವಕ್ಫ್ ಬೋರ್ಡ್‌ ಎಂದು ಸೇರ್ಪಡೆಯಾಗಿದೆ. ವಕ್ಫ್ ಬೋರ್ಡ್‌ಗೆ 1.28 ಎಕರೆ ಆಸ್ತಿಯನ್ನು ಸೇರಿಸಿದ್ದಕ್ಕೆ ಮಠದ ಭಕ್ತರು ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದಾರೆ. 13ನೇ ಶತಮಾನದಲ್ಲಿ ಸ್ಥಾಪನೆಯಾಗಿರುವ ಮಠ ಖಬರಸ್ಥಾನ ವಕ್ಫ್ ಬೋರ್ಡ್‌ ಆಗಿದ್ದು ಹೇಗೆ ಎಂದು ಪ್ರಶ್ನಿಸುತ್ತಿದ್ದಾರೆ. ಇದೇ ರೀತಿ ಸಿಂದಗಿ ತಾಲೂಕಿನಲ್ಲಿ ಅನೇಕ ಹಿಂದೂ ಮಠಗಳ ಭೂಮಿ ವಕ್ಫ್ ಬೋರ್ಡ್‌ ಸೇರಿದೆ ಎಂಬ ಶಂಕೆಯನ್ನು ಭಕ್ತರು ವ್ಯಕ್ತಪಡಿಸಿದ್ದಾರೆ. ವಕ್ಫ್‌ ಬೋರ್ಡ್‌ಗೆ ಸೇರ್ಪಡೆಯಾದ ವಿಚಾರ ತಿಳಿದು ಭಕ್ತರು ಈಗ ಮಠದ ಮುಂದೆ ಜಮಾಯಿಸುತ್ತಿದ್ದು, ಉದ್ವಿಗ್ನ ಪರಿಸ್ಥಿತಿ ನೆಲೆಸಿದ ಹಿನ್ನೆಲೆಯಲ್ಲಿ ಪೊಲೀಸರು ಸ್ಥಳಕ್ಕೆ ಧಾವಿಸಿದ್ದಾರೆ.



































 
 

Leave a Comment

Your email address will not be published. Required fields are marked *

This site uses Akismet to reduce spam. Learn how your comment data is processed.

error: Content is protected !!
Scroll to Top