ಸುಬ್ರಹ್ಮಣ್ಯ: ಕುಕ್ಕೆ ಶ್ರೀ ಸುಬ್ರಹ್ಮಣ್ಯೇಶ್ವರ ಮಹಾವಿದ್ಯಾಲಯ ಆಂತರಿಕ ಗುಣಮಟ್ಟ ಭರವಸಾ ಕೋಶ ಇದರ ಸಹಯೋಗದೊಂದಿಗೆ ಕನ್ನಡ ವಿಭಾಗದ ವತಿಯಿಂದ ಕನ್ನಡ ರಾಜ್ಯೋತ್ಸವವನ್ನು ಶುಕ್ರವಾರ ಹಮ್ಮಿಕೊಳ್ಳಲಾಯಿತು.
ಕಾರ್ಯಕ್ರಮದ ಅಧ್ಯಕ್ಷತೆಯನ್ನು ಇತಿಹಾಸ ವಿಭಾಗದ ಮುಖ್ಯಸ್ಥ ಡಾ. ಪ್ರಸಾದ್ ಎನ್ ವಹಿಸಿದರು. ಕೆ ಎಸ್ ಎಸ್ ಕಾಲೇಜಿನ ಕಚೇರಿ ಸಿಬ್ಬಂದಿ ಸುಬ್ರಹ್ಮಣ್ಯ ಕೆ. ಉದ್ಘಾಟಿಸಿದರು. ಅತಿಥಿಗಳು ಕನ್ನಡ ಭುವನೇಶ್ವರಿ ಭಾವಚಿತ್ರಕ್ಕೆ ಪುಷ್ಪಾರ್ಚನೆ ಸಲ್ಲಿಸಿದರು.
ವಿದ್ಯಾರ್ಥಿ ಸಂಘದ ಅಧ್ಯಕ್ಷ ದಿಶಾಂತ್, ಬೋಧಕ ಹಾಗೂ ಬೋಧಕೇತರ ಸಿಬ್ಬಂದಿಗಳು ಉಪಸ್ಥಿತರಿದ್ದರು. ಅನ್ವಿತಾ ಹಚ್ಚೇವು ಕನ್ನಡದ ದೀಪ ಹಾಡನ್ನು ಹಾಡಿದರು.ಕನ್ನಡ ವಿಭಾಗದ ಮುಖ್ಯಸ್ಥ ಉದಯ ಕುಮಾರ್ ಪ್ರಾಸ್ತಾವಿಕವಾಗಿ ಮಾತನಾಡಿ, ಸ್ವಾಗತಿಸಿದರು. ಕನ್ನಡ ವಿಭಾಗದ ಉಪನ್ಯಾಸಕಿ ಸುಮಿತ್ರ ನಿರೂಪಿಸಿದರು. ವಿದ್ಯಾರ್ಥಿ ಸಂಘದ ಉಪಾಧ್ಯಕ್ಷೆ ಕಲ್ಪನಾ ವಂದಿಸಿದರು.