ಉಪ್ಪಿನಂಗಡಿ: ಮಹಿಳೆಯೋರ್ವರು ಬಾವಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡ ಘಟನೆ ಕೊಣಾಲು ಗ್ರಾಮದ ಚಾಮೇತಮೂಲೆ ಎಂಬಲ್ಲಿ ನಡೆದಿದೆ.
ಅಂಬೇಡ್ಕರ್ ಎಂಬವರ ಪತ್ನಿ ಸೀತಾ (47) ಎಂಬವರು ಆತ್ಮಹತ್ಯೆ ಮಾಡಿಕೊಂಡವರು.
ಕ್ಯಾನ್ಸರ್ ಪೀಡಿತರಾಗಿದ್ದ ಸೀತಾ ಅವರು ನಿರಂತರ ಚಿಕಿತ್ಸೆ ಪಡೆದರೂ ಗುಣಮುಖರಾಗದೆ ಇದ್ದ ಬಗ್ಗೆ ಮನನೊಂದು ಮನೆಯ ಬಾವಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ಪೊಲೀಸರಿಗೆ ನೀಡಿದ ದೂರಿನಲ್ಲಿ ತಿಳಿಸಲಾಗಿದೆ. ಉಪ್ಪಿನಂಗಡಿ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ.
























