ಕನ್ನಡ ರಾಜ್ಯೋತ್ಸವಕ್ಕೆ ಮೋದಿ ಶುಭಾಶಯ

ಹೊಸದಿಲ್ಲಿ: ಕನ್ನಡ ರಾಜ್ಯೋತ್ಸವದ ಸಂದರ್ಭದಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರು ಕರ್ನಾಟಕದ ಜನತೆಗೆ ಶುಭ ಹಾರೈಸಿದ್ದಾರೆ. ಸಾಮಾಜಿಕ ಮಾಧ್ಯಮ ಎಕ್ಸ್​​​ನಲ್ಲಿ ಕನ್ನಡದಲ್ಲೇ ಸಂದೇಶ ಪ್ರಕಟಿಸುವ ಪ್ರಧಾನಿ ಕರ್ನಾಟಕದ ಜತೆ ಸದಾ ಸಂತೋಷ, ಯಶಸ್ಸು ಗಳಿಸುವಂತಾಗಲಿ ಎಂದು ಹಾರೈಸಿದ್ದಾರೆ.

ಕನ್ನಡ ರಾಜ್ಯೋತ್ಸವವು ಅತ್ಯಂತ ವಿಶೇಷವಾದ ಸಂದರ್ಭವಾಗಿದ್ದು, ಇದು ಕರ್ನಾಟಕದ ಅನುಕರಣೀಯ ಸಂಸ್ಕೃತಿ ಮತ್ತು ಸಂಪ್ರದಾಯಗಳನ್ನು ಗುರುತಿಸುತ್ತದೆ. ರಾಜ್ಯವು ಮಹಾನ್ ವ್ಯಕ್ತಿಗಳನ್ನು ಪಡೆದಿದ್ದು, ಅವರು ಎಲ್ಲ ಕ್ಷೇತ್ರಗಳಲ್ಲಿ ಅಭಿವೃದ್ಧಿ ಮತ್ತು ನಾವೀನ್ಯಕ್ಕೆ ಶಕ್ತಿ ತುಂಬುತ್ತಿದ್ದಾರೆ. ಕರ್ನಾಟಕದ ಜನರು ಸದಾ ಸಂತೋಷ ಮತ್ತು ಯಶಸ್ಸಿನಿಂದ ಕೂಡಿರಲಿ’ ಎಂದು ಸಂದೇಶದಲ್ಲಿ ಮೋದಿ ಉಲ್ಲೇಖಿಸಿದ್ದಾರೆ.

Leave a Comment

Your email address will not be published. Required fields are marked *

This site uses Akismet to reduce spam. Learn how your comment data is processed.

error: Content is protected !!
Scroll to Top