ಖಲಿಸ್ಥಾನಿ ಉಗ್ರರ ಕೃತ್ಯಕ್ಕೆ ಕೆನಡಾ ಪ್ರಧಾನಿ ಜಸ್ಟಿನ್ ಟ್ರುಡೊ ವಿಷಾದ
ಒಟ್ಟಾವಾ: ಭಾರತ-ಕೆನಡಾ ರಾಜಕೀಯ ಬಿಕ್ಕಟ್ಟಿನ ನಡುವೆ ಕೆನಡಾದಲ್ಲಿ ಹಿಂದೂಗಳ ಮೇಲೆ ಹಿಂಸಾಚಾರ ನಡೆದಿರುವ ಘಟನೆ ಬೆಳಕಿಗೆ ಬಂದಿದೆ. ಕೆನಡಾದ ಬ್ರಾಂಪ್ಟನ್ನಲ್ಲಿರುವ ಹಿಂದೂ ದೇವಾಲಯದಲ್ಲಿ ಭಕ್ತರ ಮೇಲೆ ಖಲಿಸ್ಥಾನಿ ಉಗ್ರರ ಗುಂಪೊಂದು ದಾಳಿ ನಡೆಸಿದೆ.
ಖಲಿಸ್ಥಾನಿ ಧ್ವಜ ಹಿಡಿದಿದ್ದ ಉಗ್ರರ ಗುಂಪು ದೇವಸ್ಥಾನಕ್ಕೆ ನುಗ್ಗಿ ಭಕ್ತರ ಮೇಲೆ ಮನಸೋ ಇಚ್ಚೆ ಹಲ್ಲೆ ನಡೆಸಿದೆ. ಈ ಹಲಕ್ಲೆಯ ವೀಡಿಯೊ ಜಾಲತಾಣಗಳಲ್ಲಿ ವೈರಲ್ ಆಗಿವೆ. ವೀಡಿಯೊಲ್ಲಿ ಖಲಿಸ್ಥಾನಿ ಧ್ವಜ ಹಿಡಿದ ಗುಂಪು ದೊಣ್ಣೆ ಹಿಡಿದು ಜನರನ್ನು ಥಳಿಸುತ್ತಿರುವುದನ್ನು ಕಾಣಬಹುದು.
ಹಿಂಸಾಚಾರದ ವೀಡಿಯೊ ಜಾಲತಾಣದಲ್ಲಿ ಹರಿದಾಡುತ್ತಿದ್ದಂತೆ, ಪ್ರಧಾನಿ ಜಸ್ಟಿನ್ ಟ್ರುಡೊ ದಾಳಿಯನ್ನು ತೀವ್ರವಾಗಿ ಖಂಡಿಸಿದ್ದಾರೆ. ಇಂತಹ ಹಿಂಸಾಚಾರ ಕೃತ್ಯಗಳು ಸ್ವೀಕಾರಾರ್ಹವಲ್ಲ. ಪ್ರತಿಯೊಬ್ಬ ಕೆನಡಿಯನ್ನರು ತಮ್ಮ ನಂಬಿಕೆಯನ್ನು ಮುಕ್ತವಾಗಿ ಮತ್ತು ಸುರಕ್ಷಿತವಾಗಿ ಆಚರಿಸುವ ಹಕ್ಕನ್ನು ಹೊಂದಿದ್ದಾರೆ ಎಂದು ಹೇಳಿದ್ದಾರೆ.
ಖಲಿಸ್ಥಾನಿ ಬೆಂಬಲಿಗರ ಗುಂಪು ದಾಳಿ ನಡೆಸುವ ಮೊದಲು 1984ರ ಸಿಖ್ ವಿರೋಧಿ ದಂಗೆಯನ್ನು ವಿರುದ್ಧ ಪ್ರತಿಭಟನೆ ನಡೆಸಲಾಗುತ್ತಿತ್ತು. ಈ ವೇಳೆ ಪ್ರತಿಭಟನೆ ಹಿಂಸಾಚಾರಕ್ಕೆ ತಿರುಗಿ, ಭಕ್ತರ ಮೇಲೆ ಹಲ್ಲೆ ನಡೆಸಿದೆ.