ಬೆಳ್ಳಾರೆ: ಕರ್ನಾಟಕ ಪಬ್ಲಿಕ್ ಸ್ಕೂಲ್ ನಲ್ಲಿ ವಸಂತ ಸಂಭ್ರಮ ಕಾರ್ಯಕ್ರಮ ನಡೆಯಲಿದ್ದು, ಇದರ ಅಂಗವಾಗಿ ಶಾಲಾ ಮೈದಾನದ ನವೀಕರಣಕ್ಕೆ ಗುದ್ದಲಿ ಪೂಜೆ, ವಸಂತ ಸಂಭ್ರಮದ ಲೋಗೋ ಬಿಡುಗಡೆ ಹಾಗೂ ಮನವಿ ಪತ್ರ ಬಿಡುಗಡೆ ಇಂದು ನಡೆಯಿತು.
ಕೆಪಿಎಸ್ ನ ಎಸ್.ಡಿ.ಎಂ.ಸಿ ಅಧ್ಯಕ್ಷೆ ಹಾಗೂ ಶಾಸಕಿ ಭಾಗೀರಥಿ ಮುರುಳ್ಯರವರು ಗುದ್ದಲಿ ಪೂಜೆ ನೆರವೇರಿಸಿ, ವಸಂತ ಸಂಭ್ರಮದ ಲೋಗೊ ಹಾಗು ಮನವಿ ಪತ್ರ ಬಿಡುಗಡೆಗೊಳಿಸಿದರು.
ಈ ಸಂದರ್ಭದಲ್ಲಿ ವಸಂತ ಸಂಭ್ರಮ ಸಮಿತಿ ಕಾರ್ಯಾಧ್ಯಕ್ಷೆ ರಾಜೀವಿ ಆರ್.ರೈ, ಸಂಚಾಲಕ ಎಸ್.ಎನ್. ಮನ್ಮಥ, ಪ್ರಧಾನ ಕಾರ್ಯದರ್ಶಿ ಪ್ರದೀಪ್ ಕುಮಾರ್ ರೈ ಪನ್ನೆ, ಎಸ್.ಡಿಎಂ.ಸಿ. ಕಾರ್ಯಾಧ್ಯಕ್ಷ ಶ್ರೀನಾಥ ರೈ ಬಾಳಿಲ, ಕಾಲೇಜಿನ ಪ್ರಾಂಶುಪಾಲ ಜನಾರ್ಧನ ಎನ್., ಉಪಪ್ರಾಂಶುಪಾಲೆ ಉಮಾಕುಮಾರಿ, ಹಿರಿಯ ಪ್ರಾಥಮಿಕ ಶಾಲಾ ಮುಖ್ಯ ಶಿಕ್ಷಕ ಮಾಯಿಲಪ್ಪ, ಬೆಳ್ಳಾರೆ ಅಜಪಿಲ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷ ಸುರೇಶ್ ಕುಮಾರ್ ಶೆಟ್ಟಿ ಪನ್ನೆಗುತ್ತು, ಪದ್ಮನಾಭ ಬೀಡು, ಗಂಗಾಧರ ರೈ ಪುಡ್ಕಜೆ, ಗ್ರಾಮ ಪಂಚಾಯತ್ ಸದಸ್ಯ ಚಂದ್ರಶೇಖರ ಪನ್ನೆ, ಕಟ್ಟಡ ಸಮಿತಿಯ ಹರ್ಷ ಜೋಗಿಬೆಟ್ಟು, ಐವರ್ನಾಡು ಗ್ರಾ.ಪಂ.ಉಪಾಧ್ಯಕ್ಷ ಬಾಲಕೃಷ್ಣ ಕೀಲಾಡಿ, ವಸಂತ ಉಲ್ಲಾಸ್, ಸಂಜಯ್ ನೆಟ್ಟಾರ್, ಇಂಜಿನಿಯರ್ ಗಳಾದ ಮಣಿಕಂಠ, ಗ್ರಾಮೀಣಾಭಿವೃದ್ಧಿ ಮತ್ತು ನೈರ್ಮಲ್ಯ ಹಾಗೂ ಕುಡಿಯುವ ನೀರು ಇಲಾಖೆಯ ಸಹಾಯಕ ಕಾರ್ಯಪಾಲಕ ಅಭಿಯಂತರ ಚೈತ್ರಾ ಹಾಗೂ ಇತರ ಗಣ್ಯರು ಉಪಸ್ಥಿತರಿದ್ದರು.