ರೈತರ ಅಹವಾಲು ಆಲಿಸಲು ಬಂದ ಜಂಟಿ ಸಂಸದೀಯ ಸಮಿತಿ ಅಧ್ಯಕ್ಷ
ಬೆಂಗಳೂರು: ರಾಜ್ಯ ಸರಕಾರದ ಸೂಚನೆಯ ಮೇರೆಗೆ ರೈತರ ಪಹಣಿಯಲ್ಲಿ ವಕ್ಫ್ ಆಸ್ತಿ ಎಂದು ನಮೂದಿಸಲಾಗಿದೆ, ಆಡಳಿತ ವ್ಯವಸ್ಥೆಯ ಕೈವಾಡ ಇಲ್ಲದೆ ಈ ರೀತಿ ಎಲ್ಲ ಆಗಲು ಸಾಧ್ಯವಿಲ್ಲ ಎಂಬುದಾಗಿ ವಕ್ಫ್ ಕಾಯ್ದೆ ತಿದ್ದುಪಡಿ ಜಂಟಿ ಸಂಸದೀಯ ಸಮಿತಿಯ ಅಧ್ಯಕ್ಷ ಜಗದಂಬಿಕಾ ಪಾಲ್ ಆರೋಪಿಸಿದರು.
ಇಂದು ಹುಬ್ಬಳ್ಳಿಗೆ ಭೇಟಿ ನೀಡಿ ವಕ್ಫ್ ಎಂದು ನಮೂದಾಗಿರುವ ರೈತರ ಅಹವಾಲು ಆಲಿಸಿದ ಬಳಿಕ ಮಾತನಾಡಿದ ಅವರು, ರೈತರ ಜಮೀನು, ದೇಗುಲ, ಪಾರಂಪರಿಕ ತಾಣಗಳ ದಾಖಲೆಗಳಲ್ಲಿ ವಕ್ಫ್ ಆಸ್ತಿ ಎಂದು ನಮೂದಿಸಲಾಗಿದೆ. 10-15 ರೈತರ ನಿಯೋಗ ಮನವಿ ಸಲ್ಲಿಸುವ ನಿರೀಕ್ಷೆ ಇತ್ತು. ಆದರೆ, 70ಕ್ಕೂ ಹೆಚ್ಚು ಅಹವಾಲು ಬಂದಿದೆ ಎಂದರು.
ಆಡಳಿತ ವ್ಯವಸ್ಥೆಯ ಕೈವಾಡ ಇಲ್ಲದೆ ಇದೆಲ್ಲ ಆಗಲು ಸಾಧ್ಯವಿಲ್ಲ. ರಾಜ್ಯ ಸರಕಾರದ ಸೂಚನೆಯಂತೆ ವಕ್ಫ್ ಆಸ್ತಿ ಎಂದು ಘೋಷಿಸಲಾಗಿದೆ. ಈಗ ರೈತರಿಗೆ ಕೊಟ್ಟ ನೋಟಿಸ್ ಹಿಂಪಡೆಯುವುದಾಗಿ ಹೇಳಿದ್ದಾರೆ. ರಾಜ್ಯ ಸರ್ಕಾರದ ಕೈವಾಡ ಇಲ್ಲದೆ ಆಸ್ತಿ ಕಬಳಿಸಲು ಸಾಧ್ಯವಿಲ್ಲ. ಸರ್ಕಾರದ ಸೂಚನೆ ಇಲ್ಲದೆ ಅಧಿಕಾರಿಗಳು ಹೇಗೆ ಕೆಲಸ ಮಾಡ್ತಾರೆ? ಇದು ಅತ್ಯಂತ ಗಂಭೀರವಾದ ವಿಚಾರ. ಎಲ್ಲ ಅಹವಾಲುಗಳನ್ನು ಗಂಭೀರವಾಗಿ ಪರಿಗಣಿಸಿ ವರದಿ ತಯಾರಿಸುತ್ತೇವೆ ಎಂದು ಹೇಳಿದ್ದಾರೆ.