ಬಿಂದು ಫ್ಯಾಕ್ಟರಿಗೆ ನೂತನ ವಿಧಾನ ಪರಿಷತ್ ಸದಸ್ಯ ಕಿಶೋರ್ ಕುಮಾರ್ ಪುತ್ತೂರು ಭೇಟಿ

ಪುತ್ತೂರು: ಪ್ರತಿಷ್ಠಿತ ಬಿಂದು ಫ್ಯಾಕ್ಟರಿಗೆ ನೂತನ ವಿಧಾನ ಪರಿಷತ್ ಸದಸ್ಯ ಕಿಶೋರ್ ಕುಮಾರ್ ಪುತ್ತೂರು ಅವರು ಬಿಜೆಪಿ ಮಹಾ ಸದಸ್ಯತ್ವ ಅಭಿಯಾನದ ಅಂಗವಾಗಿ ಭೇಟಿ ನೀಡಿದರು.

ಅವರನ್ನು ಸಂಸ್ಥೆಯ ಪ್ರಮುಖರಾದ ಸುಧನ್ವ ಆಚಾರ್ಯ ಸ್ವಾಗತಿಸಿ ಅಭಿನಂದಿಸಿದರು.

ಈ ಸಂದರ್ಭದಲ್ಲಿ ಕಿಶೋರ್ ಕುಮಾರ್ ಮಾತನಾಡಿ, ಜಾಗತಿಕ ಮಟ್ಟದಲ್ಲಿ ಬಿಜೆಪಿ ಅತೀ ದೊಡ್ಡ ರಾಜಕೀಯ ಪಕ್ಷವಾಗಿದೆ. ರಾಷ್ಟ್ರೀಯತೆಯ ಚಿಂತನೆಯಲ್ಲಿ ಬೀಜಾಂಕುರವಾದ ಪಕ್ಷ ಇಂದು ದೇಶದ ಜನ ಮಾನಸದಲ್ಲಿ ಆಳವಾಗಿ ಬೇರೂರಿದೆ. ದೇಶದ ಜನತೆಯ ಅಭೂತಪೂರ್ವ ಬೆಂಬಲದಿಂದ ಇವೆಲ್ಲ ಸಾಧ್ಯವಾಗಿದೆ ಎಂದರು.































 
 

ಈ ಸಂದರ್ಭದಲ್ಲಿ ಸಂಸ್ಥೆಯ ಪ್ರಮುಖರು, ಬಿಜೆಪಿ ಮಂಡಲ ಪದಾಧಿಕಾರಿಗಳು ಹಾಗೂ ಕಾರ್ಯಕರ್ತರು ಉಪಸ್ಥಿತರಿದ್ದರು.

Leave a Comment

Your email address will not be published. Required fields are marked *

This site uses Akismet to reduce spam. Learn how your comment data is processed.

error: Content is protected !!
Scroll to Top