ಪುತ್ತೂರು: ವಿವೇಕಾನಂದ ಕಾನೂನು ಮಹಾವಿದ್ಯಾಲಯದ ಎನ್ಎಸ್ಎಸ್ಯೋಜನಾ ಘಟಕದ ವತಿಯಿಂದ ‘ಭ್ರಷ್ಟಾಚಾರದ ವಿರುದ್ಧ ಜಾಗೃತಿ ಹಾಗೂ ಪ್ರಮಾಣ ವಿಧಿ’ ಸ್ವೀಕಾರ ಮಹಾವಿದ್ಯಾಲಯದ ಸುಜ್ಞಾನ ದೀಪಿಕಾ ಸಭಾಂಗಣದಲ್ಲಿ ಬುಧವಾರ ನಡೆಯಿತು.
ಕಾಲೇಜಿನ ಸಹಾಯಕ ಪ್ರಾಧ್ಯಾಪಕ, ರಾಷ್ಟ್ರೀಯ ಸೇವಾ ಯೋಜನಾ ಘಟಕದ ಕಾರ್ಯಕ್ರಮಾಧಿಕಾರಿ ಲಕ್ಷ್ಮೀಕಾಂತ ಎ. ಮಾತನಾಡಿ, ಭಾರತವನ್ನು ಭ್ರಷ್ಟಾಚಾರ ಮುಕ್ತಗೊಳಿಸುವ ನಿಟ್ಟಿನಲ್ಲಿ ಪ್ರತಿಯೊಬ್ಬ ಜವಾಬ್ದಾರಿಯುತ ನಾಗರಿಕ ತನ್ನಲ್ಲಿ ನೈತಿಕತೆಯನ್ನು ಬೆಳೆಸಿಕೊಳ್ಳಬೇಕು. ಭ್ರಷ್ಟಾಚಾರ ವಿರೋಧಿಸುವ ಪ್ರತಿಜ್ಞೆಯನ್ನು ಕೈಗೊಳ್ಳಬೇಕು ಎಂದರು.
ಸಹಾಯಕ ಪ್ರಾಧ್ಯಾಪಕಿ ಶ್ರೀರಕ್ಷಾ ಭ್ರಷ್ಟಾಚಾರದ ವಿರುದ್ಧದ ಪ್ರತಿಜ್ಞಾ ವಿಧಿ ಬೋಧಿಸಿದರು. ಮಹಾವಿದ್ಯಾಲಯದ ಕಾನೂನು ಅಧ್ಯಯನ ವಿಭಾಗದ ನಿರ್ದೇಶಕ ಡಾ. ಬಿ.ಕೆ. ರವೀಂದ್ರ ಅಧ್ಯಕ್ಷತೆ ವಹಿಸಿದ್ದರು. ಕಾಲೇಜಿನ ಪ್ರಾಂಶುಪಾಲೆ ಅಕ್ಷತಾ ಎ. ಪಿ. ಉಪಸ್ಥಿತರಿದ್ದರು.