ಪುತ್ತೂರು: ಅನಾರೋಗ್ಯದ ಹಿನ್ನಲೆಯಲ್ಲಿ ಯುವ ವಕೀಲ ಕುಂಬ್ರ ನಿವಾಸಿ ಚಂದ್ರಕಾಂತ್ ಅಡೂರ್ (38) ಮೃತಪಟ್ಟಿದ್ದಾರೆ.
ವೃತ್ತಿಯಲ್ಲಿ ವಕೀಲರಾಗಿದ್ದ ಚಂದ್ರಕಾಂತ್ ರವರು ವಕೀಲ ಸಂಘದ ಕಾರ್ಯಕ್ರಮಗಳಲ್ಲಿ ಸಕ್ರಿಯರಾಗಿದ್ದರು. ಉತ್ತಮ ಕ್ರೀಡಾಪಟುವಾಗಿದ್ದ ಅವರು,
ಅನಾರೋಗ್ಯದ ಹಿನ್ನಲೆ ಅವರನ್ನು ಪುತ್ತೂರಿನ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು ಬಳಿಕ ಹೆಚ್ಚಿನ ಚಿಕಿತ್ಸೆಗೆ ಮಂಗಳೂರಿನ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು ಆದರೆ ಚಿಕಿತ್ಸೆ ಫಲಕಾರಿಯಾಗದೆ ಅವರು ಮೃತಪಟ್ಟಿದ್ದಾರೆ ಎಂದು ತಿಳಿದು ಬಂದಿದೆ.
ಮೃತರು ಪತ್ನಿ, ಮಗು, ಕುಟುಂಬಸ್ಥರನ್ನು ಹಾಗೂ ಅಪಾರ ಬಂದು ಮಿತ್ರರನ್ನು ಆಗಲಿದ್ದಾರೆ.